ಸೈಬಿರಿಯಾದಲ್ಲಿ ಹೆಲಿಕಾಪ್ಟರ್ ಪತನ : 19 ಮಂದಿ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

At-least-19-dead-in-Russian

ಮಾಸ್ಕೋ, ಅ.22- ವಾಯುವ್ಯ ಸೈಬಿರಿಯಾದಲ್ಲಿ ಹೆಲಿಕಾಪ್ಟರ್ ಪತನಗೊಂಡು ಕನಿಷ್ಠ 19 ಮಂದಿ ದುರಂತ ಸಾವಿಗೀಡಾಗಿದ್ದಾರೆ ಎಂದು ರಷ್ಯಾದ ತನಿಖಾ ಸಮಿತಿ ತಿಳಿಸಿದೆ.
ನೋವಿ ಉರೆನ್‍ಗೋಯ್ ನಗರ ಹೊರವಲಯದಲ್ಲಿ ನಿನ್ನೆ ರಾತ್ರಿ 22 ಜನರನ್ನು ಹೊತ್ತೊಯ್ಯುತ್ತಿದ್ದ ಎಂಐ-8 ಹೆಲಿಕಾಪ್ಟರ್ ಅಪಘಾತಕ್ಕೀಡಾಯಿತು. ಪ್ರಾಥಮಿಕ ಮಾಹಿತಿ ಪ್ರಕಾರ ಬಹು ಗಾಯಗಳಿಂದಾಗಿ ಕನಿಷ್ಠ 19 ಮಂದಿ ದುರ್ಘಟನೆ ನಡೆದ ಸ್ಥಳದಲ್ಲೇ ಮೃತರಾದರು ಎಂದು ತನಿಖಾಧಿಕಾರಿಗಳು ಹೇಳಿಕೆಯೊಂದರಲ್ಲಿ ತಿಳಿಸಿದ್ಧಾರೆ.  ಅಪಘಾತದ ಸುದ್ದಿ ತಿಳಿದ ತಕ್ಷಣ ತುರ್ತು ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ತೆರಳಿದರು ಹಾಗೂ ಹೆಲಿಕಾಪ್ಟರ್ ಅವಶೇಷಗಳಲ್ಲಿ ಸಿಲುಕಿ ತೀವ್ರ ಗಾಯಗೊಂಡ ಇತರ ಮೂವರನ್ನು ನೋವಿ ಉರೆನ್‍ಗೋಯ್ ಆಸ್ಪತ್ರೆಗೆ ಸ್ಥಳಾಂತರಿಸಿದರು ಎಂದು ಅವರು ಹೇಳಿದ್ದಾರೆ.

ಈ ದುರಂತಕ್ಕೆ ಹಾರಾಟ ರಕ್ಷಣೆ ನಿಬಂಧನೆಗಳ ಉಲ್ಲಂಘನೆ ಕಾರಣವಲ್ಲ. ತಾಂತ್ರಿಕ ದೋಷ ಅಥವಾ ಪ್ರತಿಕೂಲ ಹವಾಮಾನದಿಂದ ಅಪಘಾತ ಸಂಭವಿಸಿದೆ. ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ.  ಸೈಬಿರಿಯಾದ ಇಗರ್ಕಾ ಪಟ್ಟಣದ ಹೊರವಲಯದಲ್ಲಿ ಕಳೆದ ವರ್ಷ ಇದೇ ರೀತಿಯ ಹೆಲಿಕಾಪ್ಟರ್ ದುರಂತದಲ್ಲಿ 15 ಮಂದಿ ಮೃತಪಟ್ಟಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin