ಸೊಸೆ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಹೃದಯಾಘಾತದಿಂದ ಪ್ರಾಣಬಿಟ್ಟ ಅತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

sghaddfhfh

ಕೊಡಗು, ಆ.9-ಸೊಸೆಯ ಆತ್ಮಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ   ಮನನೊಂದು ಅತ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಿಗ್ಗೆ ನಡೆದಿದೆ.  ನಲ್ಲೂರು ಗ್ರಾಮದ ನಿವಾಸಿ ಪಾರ್ವತಮ್ಮ (53) ಹೃದಯಾಘಾತದಿಂದ ಮೃತಪಟ್ಟ ಅತ್ತೆ. ಶೃತಿ (21) ಆತ್ಮಹತ್ಯೆಗೆ ಶರಣಾದ ಸೊಸೆ. ಪಾರ್ವತಮ್ಮ ನವರ ಮಗನನ್ನು ಶೃತಿ ಇತ್ತೀಚೆಗಷ್ಟೇ ಮದುವೆಯಾಗಿದ್ದರು. ಇವರ ವೈವಾಹಿಕ ಜೀವನ ಚೆನ್ನಾಗಿಯೇ ಇತ್ತು ಎನ್ನಲಾಗಿದೆ. ಆದರೆ ಬಾಡಿಗೆ ಮನೆ ಮಾಡಲಿಲ್ಲವೆಂದು ಪತಿಯೊಂದಿಗೆ ಮುನಿಸಿಕೊಂಡಿದ್ದ ಶೃತಿ  ನಿನ್ನೆ ರಾತ್ರಿ ಮನÉಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.   ಸೊಸೆಯನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದ ಅತ್ತೆಗೆ   ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಅತ್ತೆ ಪಾರ್ವತಮ್ಮ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

Sri Raghav

Admin