ಸೋನಿಯಾ ಗಾಂಧಿಗೆ ಹುಟ್ಟುಹಬ್ಬದ ಶುಭಾಷಯ ಕೋರಿದ ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Sonia

ನವದೆಹಲಿ, ಡಿ.9-ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು 70ನೇ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸೋನಿಯಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದ್ದಾರೆ. ಶ್ರೀಮತಿ ಸೋನಿಯಾ ಗಾಂಧಿಯವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ಅವರಿಗೆ ಉತ್ತಮ ಆರೋಗ್ಯ ನೀಡಿ ದೀರ್ಘ ಆಯುಷ್ಯ ಕರುಣಿಸಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.  ನೋಟು ರದ್ದತಿ ವಿರುದ್ಧ ಕಾಂಗ್ರೆಸ್ ಪಕ್ಷವು ತಮ್ಮ ವಿರುದ್ಧ ತೀವ್ರ ವಾಗ್ದಾಳಿಯನ್ನು ಮಂದುವರಿಸಿದ್ದರೂ ಮೋದಿ ಅವರು ಪಕ್ಷದ ಅಧಿನಾಯಕಿಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ಸೋನಿಯಾಗೆ ಸಿದ್ದರಾಮಯ್ಯ ಶುಭಾಶಯ

ನವದೆಹಲಿ, ಡಿ.9- ರಾಜಧಾನಿ ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭ ಕೋರಿದರು.
ಸಚಿವರಾದ ಟಿ.ಬಿ.ಜಯಚಂದ್ರ ಮತ್ತು ಎಂ.ಟಿ.ಪಾಟೀಲ್ ಅವರೊಂದಿಗೆ ದೆಹಲಿಯ ಜನ್‍ಪಥ್ ರಸ್ತೆಯಲ್ಲಿರುವ ಸೋನಿಯಾ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ ಪುಷ್ಪಗುಚ್ಚ ನೀಡಿ ಜನ್ಮದಿನದ ಶುಭಾಶಯ ಸಲ್ಲಿಸಿದರು. ಬಳಿಕ ಕೆಲಕಾಲ ಅವರೊಂದಿಗೆ ಚರ್ಚಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin