ಸೋನಿಯಾ-ರಾಹುಲ್’ರನ್ನು ಭೇಟಿಯಾದ ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Congress--Rahul-gandhi-Kuma
ಬೆಂಗಳೂರು, ಮೇ 21-ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಕುರಿತಂತೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರೊಂದಿಗೆ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬುಧವಾರ ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಮೈತ್ರಿ ಸರ್ಕಾರದ ಸ್ವರೂಪ ಹೇಗಿರಬೇಕು, ಸಚಿವ ಸ್ಥಾನದ ಹಂಚಿಕೆ ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸೋನಿಯಾಗಾಂಧಿ ಹಾಗೂ ರಾಹುಲ್‍ಗಾಂಧಿಯವರಿಗೆ ವಿಶೇಷ ಆಹ್ವಾನವನ್ನು ಕುಮಾರಸ್ವಾಮಿ ಸಂದರ್ಭದಲ್ಲಿ ನೀಡಿದ್ದಾರೆ. ಇಂದು ಸಂಜೆ ಕುಮಾರಸ್ವಾಮಿ ಅವರು ಸೋನಿಯಾಗಾಂಧಿ ಮತ್ತು ರಾಹುಲ್‍ಗಾಂಧಿಯವರೊಂದಿಗೆ ಮಾತುಕತೆ ನಡೆಸಿ ರಾತ್ರಿ ಮತ್ತೆ ನಗರಕ್ಕೆ ವಾಪಸ್ಸಾಗುತ್ತಿದ್ದಾರೆ. ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ನಂತರ ಪ್ರತಿಕ್ರಿಯಿಸಿದ ಹೆಚ್ಡಿಕೆ ನಾಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಮತ್ತು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸೇರಿ ಸಚಿವರ ಆಯ್ಕೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಇಂದು ದೆಹಲಿಯಲ್ಲಿ ಬುಧವಾರ ಎಷ್ಟು ಮಂದಿ ಪ್ರಮಾಣವಚನ ತೆಗೆದುಕೊಳ್ಳಬೇಕು, ಕಾಂಗ್ರೆಸ್‍ಗೆ ಎಷ್ಟು ಖಾತೆ ಬಿಟ್ಟುಕೊಡಬೇಕು, ಜೆಡಿಎಸ್‍ಗೆ ಎಷ್ಟು ಖಾತೆ ಉಳಿಸಿಕೊಳ್ಳಬೇಕು, ಸಚಿವ ಸ್ಥಾನವನ್ನು ಯಾರ್ಯಾರಿಗೆ ನೀಡಬೇಕೆಂಬುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಮಾಲೋಚನೆಯನ್ನು ಉಭಯ ಪಕ್ಷಗಳ ನಾಯಕರು ನಡೆಸಿದ್ದಾರೆ ಎನ್ನಲಾಗಿದೆ.

ಮಾಯಾವತಿಗೂ ಆಹ್ವಾನ:

Mayavati
ಬಿಎಸ್‍ಪಿ ನಾಯಕಿ ಹಾಗೂ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಎಚ್.ಡಿ.ಕುಮಾರಸ್ವಾಮಿ ಆಹ್ವಾನ ನೀಡಿದ್ದಾರೆ.   ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಬಿಎಸ್‍ಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು.  ಬಿಎಸ್‍ಪಿ ಕೂಡ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಜಯಗಳಿಸಿದೆ. ಹೀಗಾಗಿ ಮಾಯಾವತಿಯವರೂ ಕೂಡ ಬುಧವಾರ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ.

Facebook Comments

Sri Raghav

Admin