ಸೋಲಿಗೆ ಮತಯಂತ್ರದ ಮೇಲೆ ಗೂಬೆ ಕೂರಿಸಿದ ಎಎಪಿ

ಈ ಸುದ್ದಿಯನ್ನು ಶೇರ್ ಮಾಡಿ

Arvind-Kejriwal-0001

ನವದೆಹಲಿ,ಏ.26- ರಾಷ್ಟ್ರ ರಾಜಧಾನಿಯ ಮೂರು ಮಹಾನಗರ ಪಾಲಿಕೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿರುವುದಕ್ಕೆ ವಿದ್ಯುನ್ಮಾನ ಮತ ಯಂತ್ರ(ಇವಿಎಂ) ಕಾರಣ ಎಂದು ಬೊಟ್ಟು ಮಾಡಲಾಗಿದೆ.   ಇದು ಪ್ರಧಾನಿ ಮೋದಿ ಅಲೆ ಅಲ್ಲ. ಇವಿಎಂ ಬಲೆಯಿಂದ ಬಿಜೆಪಿ ಗೆದ್ದಿದೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದು ದೆಹಲಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಗೋಪಾಲ್‍ರಾಯ್ ಆರೋಪಿಸಿದ್ದಾರೆ.   ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್‍ನಲ್ಲಿ ಇವಿಎಂಗಳನ್ನು ತಿರುಚಿದಂತೆ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ತಿರುಚಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಫಲಿತಾಂಶ ಬಂದಿರುವುದು ಎಲ್ಲರಿಗೂ ಅಚ್ಚರಿ ಉಂಟು ಮಾಡಿದೆ ಎಂದು ಟೀಕಿಸಿದ್ದಾರೆ.ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಂಡಾಂತರದಲ್ಲಿದೆ. ಬಿಜೆಪಿ ಮತಯಂತ್ರಗಳ ಮೂಲಕ ಚುನಾವಣೆಯನ್ನು ಗೆಲ್ಲಲು ಹೊರಟಿದೆ ಎಂದು ದೂರಿದರು. ಇನ್ನು ಎಎಪಿಯ ಮತ್ತೊಬ್ಬ ಮುಖಂಡ ಅಶೋತೋಷ್ ಘೋಷ್ ಬಿಜೆಪಿಗೆ ಇಷ್ಟು ಪ್ರಮಾಣದಲ್ಲಿ ಜನರು ಮತ ಹಾಕಲು ಸಾಧ್ಯವೇ ಇಲ್ಲ. ಯಾವ ಕಾರಣಕ್ಕಾಗಿ ಜನರು ಬಿಜೆಪಿಯನ್ನು ಗೆಲ್ಲಿಸಿದ್ದಾರೆಂಬುದು ತಿಳಿಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.   ದೆಹಲಿಯಲ್ಲಿ ನಾವು ಉತ್ತಮ ಆಡಳಿತ ನೀಡಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ಆದರೂ ನಮ್ಮ ಪಕ್ಷವನ್ನು ಜನತೆ ಇಷ್ಟು ಸಾರಾಸಗಟಾಗಿ ತಿರಸ್ಕರಿಸಿರುವುದು ಏಕೆಂಬುದು ತಿಳಿಯುತ್ತಿಲ್ಲ. ಇವಿಎಂ ತಿರುಚಿರುವುದೇ ಬಿಜೆಪಿಯ ಗೆಲುವೇ ಕಾರಣ ಎಂದು ಆಪಾದಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin