ಸೋಲಿನ ಭೀತಿಗೆ ಬಿಜೆಪಿಯಿಂದ ಅಪರೇಷನ್ ಕಮಲ ಮಾಡುತ್ತಿದೆ : ಉಗ್ರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Ugrappa--0011

ಬೆಂಗಳೂರು,ಜು.31-ಗುಜರಾತ್‍ನಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಆರೋಪಿಸಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲಿನ ಭೀತಿಯಿಂದ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಿ ಆಪರೇಷನ್ ಕಮಲ ಮಾಡಲು ಬಿಜೆಪಿಯವರು ಮುಂದಾಗಿದ್ದಾರೆ. ಆಪರೇಷನ್ ಕಮಲದ ಜನಕ ಬಿ.ಎಸ್.ಯಡಿಯೂರಪ್ಪ ಅವರು ಇದಕ್ಕೆ ಪೂರಕವಾಗಿ ಮಾತನಾಡುತ್ತಿದ್ದಾರೆ ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇದರ ರೂವಾರಿಯಾಗಿದ್ದು , ಪ್ರಧಾನಿ ನರೇಂದ್ರ ಮೋದಿಯವರು ಪರೋಕ್ಷವಾಗಿ ಸರ್ವಾಧಿಕಾರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಪ್ರಧಾನಿ ಹುದ್ದೆಯಲ್ಲಿರುವ ಮೋದಿ ಇಂತಹ ಕೆಲಸ ಮಾಡುವುದು ಸರಿಯಲ್ಲ ಎಂದರು.  ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್‍ನಲ್ಲಿ , ಜಿಎಸ್‍ಟಿ ಬಂದ ನಂತರ ಎಲ್ಲ ಬೆಲೆಗಳು ಇಳಿಕೆಯಾಗಲಿವೆ ಎಂದಿದ್ದರು. ಆದರೆ ತರಕಾರಿ ಸೇರಿದಂತೆ ಹಲವು ವಸ್ತುಗಳ ಬೆಲೆ ಗಗನಕ್ಕೇರಿದೆ. ಜೊತೆಗೆ ಪೆಟ್ರೋಲ್ ಕೂಡ ಏರಿಕೆಯಾಗಿದೆ. ಅಧಿಕಾರಕ್ಕಾಗಿ ಬಿಜೆಪಿ ಏನುಬೇಕಾದರೂ ಮಾಡಲು ಹಿಂಜರಿಯುವುದಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದ್ದು , ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕ ತರುತ್ತಿದ್ದಾರೆ ಎಂದು ಉಗ್ರಪ್ಪ ಕಿಡಿಕಾರಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin