ಸೋಲು-ಗೆಲುವು ಬದಿಗಿಟ್ಟು ಖುಷಿಯಿಂದ ಪಾಲ್ಗೊಳ್ಳಿ

ಈ ಸುದ್ದಿಯನ್ನು ಶೇರ್ ಮಾಡಿ

turuvekere

ತುರುವೇಕೆರೆ, ಸೆ.23-ವಿದ್ಯಾರ್ಥಿಗಳು ಸೋಲು ಗೆಲುವನ್ನು ಬದಿಗಿಟ್ಟು ಖುಷಿಯಿಂದ ಕ್ರೀಡೆಗಳಲ್ಲಿ ಪಾಲ್ಗೊಳ್ಳಿ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಸಲಹೆ ನೀಡಿದರು.ಸರ್ಕಾರಿ ಪದವಿ ಪೂರ್ವ ಕಾಲೇಜಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 14 ಮತ್ತು 17 ವಯೋಮಿತಿಯ ಬಾಲಕ, ಬಾಲಕಿಯರ ತುಮಕೂರು ಜಿಲ್ಲಾ ಮಟ್ಟದ ಖೋ- ಖೋ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.ತಾಲೂಕಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಮ್ಮಿಕೊಂಡಿರುವುದು ಸಂತೋಷದ ವಿಚಾರವಾಗಿದೆ. ಬಿಇಒ ಹಾಗೂ ಅಧಿಕಾರಿಗಳು ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ವಿದ್ಯಾರ್ಥಿಗಳು ತನ್ನ ಓದಿನ ಜೊತೆಗೆ ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಬೇಕು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಕ್ಕಳು ದೈಹಿಕವಾಗಿ, ಮಾನಸಿಕವಾಗಿ ಸದೃಢವಾಗಲು ಸಹಕಾರಿಯಾಗಲಿದೆ ಎಂದರು.

ತಾಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷೆ ತೀರ್ಥಕುಮಾರಿರವಿಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಪಂದ್ಯಾವಳಿಯಲ್ಲಿ ತುಮಕೂರು, ಗುಬ್ಬಿ, ಕುಣಿಗಲ್, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ತಿಪಟೂರು ತಾಲೂಕಿನ ತಲಾ 48 ರಂತೆ 288 ಕ್ರೀಡಾಪಟುಗಳು ಭಾಗವಹಿಸಿದ್ದರು.ಜಿಲ್ಲಾ ಪಂಚಾಯ್ತಿ ಸದಸ್ಯೆ ರೇಣುಕ ಕೃಷ್ಣಮೂರ್ತಿ, ತಾ. ಪಂ. ಉಪಾಧ್ಯಕ್ಷೆ ಕೆಂಪಮ್ಮ ವಿದ್ಯಾರ್ಥಿಗಳಿಂದ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ತಾ. ಪಂ. ಅಧ್ಯಕ್ಷೆ ನಾಗರತ್ನ, ಸದಸ್ಯರಾದ ಸ್ವಾಮಿ, ಹೆಚ್.ಎನ್.ಮಹಾಲಿಂಗಯ್ಯ, ಮಂಜುನಾಥ್, ಸಿ.ಆರ್.ರವಿ, ನೆಂಜೇಗೌಡ, ಗ್ರಾ. ಪಂ.ಅಧ್ಯಕ್ಷ ಶ್ರೀನಿವಾಸ್, ಬಿಇಒ ರಂಗಧಾಮಯ್ಯ ಮತ್ತಿತರರು ಪಾಲ್ಗೊಂಡಿದ್ದರು.

► Follow us on –  Facebook / Twitter  / Google+

 

Facebook Comments

Sri Raghav

Admin