ಸೋಲು-ಗೆಲುವು ಸಹಜ ಒಂದುಗೂಡಿ ಆಟವಾಡಿ

ಈ ಸುದ್ದಿಯನ್ನು ಶೇರ್ ಮಾಡಿ

CHELURU

ಚೇಳೂರು,ಆ.19-ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ ಎಲ್ಲರು ಒಂದುಗೂಡಿ ಆಟವಾಡಿದರೆ ಗೆಲುವು ಖಚಿತ ಎಂದು ಕರ್ನಾಟಕ ರಾಜ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ರಂಗಸ್ವಾಮಯ್ಯ ತಿಳಿಸಿದರು.ಗುಬ್ಬಿ ತಾಲ್ಲೂಕಿನ ಹೂವಿನಕಟ್ಟೆಯ ಮೂರಾರ್ಜಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಹಾಗಲವಾಡಿ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ ಸೋಲನ್ನು ಸವಾಲಾಗಿ ಸ್ವೀಕರಿಸಿದರೆ ಮುಂದಿನ ದಿನಗಳಲ್ಲಿ ಗೆಲುವು ಕಟ್ಟಿಟ್ಟ ಬುಟ್ಟಿ ಎಂದರು. ಸರ್ಕಾರ ಕ್ರೀಡೆಗೆ ಸಾಕಷ್ವು ಸೌಲಭ್ಯಗಳನ್ನು ನೀಡುತ್ತದೆ. ಶಿಕ್ಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಕ್ರೀಡೆಗಳತ್ತ ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು ಎಂದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಯೋಗಾನಂದ್ ಮಾತನಾಡಿ, ವಿದ್ಯಾರ್ಥಿಗಳು ಮನಸು ಮಾಡಿದರೆ ಏನುಬೇಕಾದರೂ ಮಾಡಬಹುದು ಮನಸ್ಸಿಗಿಂತ ದೊಡ್ಡದು ಏನೂ ಇಲ್ಲ. ಶ್ರಮವಹಹಿಸಿ ಆಟವಾಡಿದರೆ ಮಾತ್ರ ಗೆಲ್ಲಲು ಸಾಧ್ಯ ಎಂದು ತಿಳಿಸಿದರು.  ಜಿಲ್ಲಾ ಪಂಚಾಯಿತಿ ಸದಸ್ಯೆ ಯಶೋಮ್ಮ ಶಿವಣ್ಣ , ರಾಮಾಂಜಿನಯ್ಯ , ತಾಲ್ಲೂಕ್ ಪಂಚಾಯಿತಿ ಅಧ್ಯಕ್ಷೆ ಅನುಸೂಯ , ತಾಪಂ ಸದಸ್ಯರಾದ ಕರಿಯಮ್ಮ ರಮೇಶ್ , ಮಂಜುಳ , ಯೋಗೀಶ್ , ಅ.ನಾ. ಲಿಂಗಪ್ಪ , ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು , ಗ್ರಾಪಂ ಸದಸ್ಯರು ಹಾಜರಿದ್ದರು.

 

► Follow us on –  Facebook / Twitter  / Google+

 

Facebook Comments

Sri Raghav

Admin