ಸ್ಟಾಲಿನ್ ಸೇರಿ 2,000ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

MK Stalinಚೆನ್ನೈ ,ಫೆ.19-ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ತಮ್ಮ ಮತ್ತು ತಮ್ಮ ಶಾಸಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಮರೀನಾ ಬೀಚ್‍ನಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್, ಪಕ್ಷದ ಶಾಸಕರು, ಸಂಸದರು ಮತ್ತು ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅಕ್ರಮ ಸಭೆ ಮತ್ತು ಸಾರ್ವಜನಿಕ ಆದೇಶ ಉಲ್ಲಂಘನೆ ಆರೋಪದ ಮೇಲೆ ಸ್ಟಾಲಿನ್, ಅವರ ಸಹೋದರಿ ಕನಿಮೋಳಿ, 67 ಶಾಸಕರು, 7 ಸಂಸದರು ಮತ್ತು 2,000ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖ್ಯಮಂತ್ರಿ ಯಡಪ್ಪಾಡಿ ಪಳನಿಸ್ವಾಮಿ ವಿಶ್ವಾಸ ಮತ ಯಾಚನೆ ವೇಳೆ ಗೌಪ್ಯ ಮತದಾನಕ್ಕೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಡಿಎಂಕೆ ನಿನ್ನೆ ವಿಧಾನಸಭೆಯಲ್ಲಿ ಅಗ್ರಹಿಸಿತ್ತು. ಈ ಸಂದರ್ಭದಲ್ಲಿ ಉಂಟಾದ ಗದ್ದಲದಲ್ಲಿ ತಮ್ಮ ಮತ್ತು ತಮ್ಮ ಶಾಸಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಮರೀನಾ ಬೀಚ್‍ನ ಗಾಂಧಿ ಪ್ರತಿಮೆ ಮುಂದಿ ಪ್ರತಿಭಟನಾ ಧರಣಿ ನಡೆಸಲಾಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

 

Facebook Comments

Sri Raghav

Admin