ಸ್ಟೀಲ್ ಬ್ರಿಡ್ಜ್ ನಿರ್ಮಾಣದಲ್ಲಿ ಕಮೀಷನ್ ಪಡೆಯಲಾಗಿದೆ : ಲೋಕಾಯುಕ್ತರಿಗೆ ರಾಜೀವ್ ದೂರು
ಬೆಂಗಳೂರು,ಫೆ.17-ನಗರದ ಸಂಚಾರ ದಟ್ಟಣೆ ನಿಯಂತ್ರಣ ನೆಪದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಟೀಲ್ ಬ್ರಿಡ್ಜ್’ಗೆ ಕಮೀಷನ್ ಪಡೆಯಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಇಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಲೋಕಾಯುಕ್ತರಿಗೆ ದೂರು ಸಲ್ಲಿಸಿದರು. ಲೋಕಾಯುಕ್ತ ಕಚೇರಿಗೆ ತೆರಳಿದ ಅವರು, ಸ್ಟೀಲ್ ಬ್ರಿಡ್ಜ್ ನಿರ್ಮಾಣ ಆರಂಭಿಸುತ್ತಿರುವ ಸರ್ಕಾರ ಇದಕ್ಕಾಗಿ ಕಮೀಷನ್ ಪಡೆದಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸಿ ದೂರು ನೀಡಿದರು. ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೆಬ್ಬಾಳ ಫ್ಲೈಓವರ್ವರೆಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 65 ಕೋಟಿ ಕಮೀಷನ್ ಪಡೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದರು.
ಈ ಬಗ್ಗೆ ಆರೋಪ-ಪ್ರತ್ಯಾರೋಪಗಳು ಕೇಳಿಬರುತ್ತಿರುವ ನಡುವೆಯೇ ಇಂದು ರಾಜೀವ್ ಚಂದ್ರಶೇಖರ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS