ಸ್ಯಾಂಡಲ್‍ವುಡ್ ನಟಿಯಿಂದ ಪತಿ ವಿರುದ್ಧ ದೂರು

ಈ ಸುದ್ದಿಯನ್ನು ಶೇರ್ ಮಾಡಿ

Actress
ಬೆಂಗಳೂರು,ಮಾ.20- ಪತಿಯು ವಿನಾಕಾರಣ ತನಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಸ್ಯಾಂಡವುಡ್ ನಟಿ ಚೈತ್ರಾ ಎಂಬುವರು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕನ್ನಡ ಸಿನಿಮಾದಲ್ಲಿ ನಟಿಸಿರುವ ಈ ನಟಿಗೆ 2006ರಲ್ಲಿ ಲಿಕ್ಕರ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಪರಿಚಯಿಸಿಕೊಂಡಿದ್ದ ಬಾಲಾಜಿ ಪೋತರಾಜ್ ಎಂಬಾತನೊಂದಿಗೆ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದು , ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.  ಕೆಲ ತಿಂಗಳಿನಿಂದ ವಿನಾಕಾರಣ ಚೈತ್ರಾಳಿಗೆ ಪತಿ ಹಿಂಸೆ ನೀಡುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು.   ಕಳೆದ ಮಾ.14ರಂದು ಕ್ಷುಲ್ಲಕ ವಿಚಾರಕ್ಕೆ ತನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಮನೆಯಿಂದ ಹೊರಗೆ ಹಾಕುವ ಉದ್ದೇಶದಿಂದ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದು, ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ನೊಂದ ಚೈತ್ರಾ ಪತಿ ವಿರುದ್ಧ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

Facebook Comments

Sri Raghav

Admin