ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಬಂದೋಬಸ್ತ್

ಈ ಸುದ್ದಿಯನ್ನು ಶೇರ್ ಮಾಡಿ

Roop-kuar--1

ಬೆಂಗಳೂರು, ಆ.12- ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪ್‍ಕುಮಾರ್ ದತ್ತ ತಿಳಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅಲರ್ಟ್ ನೀಡಿಲ್ಲ. ಆದರೆ, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈವರೆಗೂ ಯಾವುದೇ ಸಮಾಜಘಾತುಕ ಶಕ್ತಿಗಳಿಂದ ಬೆದರಿಕೆ ಕರೆ ಬಂದಿಲ್ಲ. ಕಾಲಕಾಲಕ್ಕೆ ಗುಪ್ತಚರ ಇಲಾಖೆ ನೀಡುವ ಮಾಹಿತಿಯನ್ನು ಆಧರಿಸಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪೊಲೀಸ್ ಬೋರ್ಡ್ (ಪಿಇಬಿ) ಮೂಲಕವೇ ವರ್ಗಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಕರಾವಳಿಯ ಭಟ್ಕಳದ ಕೋಮುಗಲಭೆಗೆ ಸಂಬಂಧಿಸಿದಂತೆ ಯಾವುದೇ ಸಂಘಟನೆ ನಿಷೇಧಿಸುವಂತೆ ಸರ್ಕಾರಕ್ಕೆ ವರದಿ ಬಂದಿಲ್ಲ.  ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದೆ. ತಪ್ಪಿತಸ್ಥರನ್ನು ಶೀಘ್ರ ಬಂಧಿಲಾಗುವುದು. ಈ ಕೊಲೆ ಪೂರ್ವ ನಿಯೋಜನೆಯಾಗಿದ್ದು, ಸಂಘಟನೆಯೊಂದು ಅದರ ಹಿಂದೆ ಇದ್ದಂತೆ ಕಂಡುಬಂದಿದೆ. ಅದರ ಹಿಂದೆ ಯಾರಿದ್ದಾರೆಂಬ ಮಾಹಿತಿ ಇದೆ. ಹಂತಕರನ್ನು ಪತ್ತೆ ಮಾಡಲು ಕೇರಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೂ ನಮ್ಮ ಪೊಲೀಸರು ಹೋಗಿದ್ದಾರೆಂದು ತಿಳಿಸಿದರು.

ಭಟ್ಕಳದ ಘಟನೆಗೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದ್ದು, ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ವರದಿ ನೀಡಲಾಗಿದೆ ಎಂದು ಹೇಳಿದರು.

Facebook Comments

Sri Raghav

Admin