ಹಗರಿ ಬೊಮ್ಮನಹಳ್ಳಿ ರೈತರ ಬೇಡಿಕೆ ಈಡೇರಿಕೆಗೆ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

HDD

ಬೆಂಗಳೂರು,ಆ.8- ಹಗರಿ ಬೊಮ್ಮನಹಳ್ಳಿಯ ರೈತರ ಬೇಡಿಕೆ ಸೂಕ್ತವಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಇಂದಿಲ್ಲಿ ತಿಳಿಸಿದರು.  ನಗರದ ಪ್ರೀಡಂಪಾರ್ಕ್‍ನಲ್ಲಿ  ಪ್ರತಿಭಟನೆ ನಡೆಸುತ್ತಿರುವ ಹಗರಿಬೊಮ್ಮನಹಳ್ಳಿಯ ರೈತರನ್ನು ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಸಮಂಜಸವಾದ ರೈತರ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕೆಂದು ಪತ್ರದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹೇಳಿದರು.

ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವ ನಿಯಮಗಳನ್ನು  ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆಯಲಾಗಿದೆ. ಸಿಎಂ ಕೂಡ ಅರ್ಥ ಮಾಡಿಕೊಂಡಿದ್ದಾರೆ. ನಾವೂ ಕೂಡ ರಾಜ್ಯದಲ್ಲಿ ಪಕ್ಷಾತೀತವಾಗಿ ಒಗ್ಗಟ್ಟು ಪ್ರದರ್ಶನ ಮಾಡಬೇಕಾಗಿದೆ ಎಂದು ತಿಳಿಸಿದರು. ನಮ್ಮ ಪಕ್ಷದ ನಿಲುವು ಏನು ಎಂಬುದು ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಮಹದಾಯಿ ನೀರು ಹಂಚಿಕೆಯಲ್ಲಿ ಹೋರಾಟ ಮಾಡಿದ ರೈತರನ್ನು ಬಂಧಿಸಲಾಗಿದೆ. ಬಂಧಿತ ರೈತರನ್ನು ಕೂಡಲೇ ಬಿಡುಗಡೆ ಮಾಡಬೇಕೆಂಬ ಮನವಿಗೆ ಮುಖ್ಯಮಂತ್ರಿಗಳು ಕೂಡ ಸ್ಪಂದಿಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ ಎಂದರು.  ರಾಜ್ಯದ ಪರ ಮಹದಾಯಿ ನ್ಯಾಯಾಧಿಕರಣದಲ್ಲಿ ವಾದ ಮಂಡಿಸುತ್ತಿರುವ ಹಿರಿಯ ವಕೀಲ ನಾರಿಮನ್ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇದೇ ವೇಳೆ ತಿಳಿಸಿದರು.

Facebook Comments

Sri Raghav

Admin