ಹಣ-ಆಭರಣದ ಜೊತೆಗೆ ಮೇಕೆಗಳನ್ನು ಹೊತ್ತೊಯ್ದ ಕಳ್ಳರು

ಈ ಸುದ್ದಿಯನ್ನು ಶೇರ್ ಮಾಡಿ

Theft-Thief-01

ತುಮಕೂರು,ಜು.3-ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು ಬೀರುವಿನಲ್ಲಿದ್ದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಗುಬ್ಬಿ ತಾಲ್ಲೂಕಿನ ಮುದ್ದ ಗೆರೆ ಗ್ರಾಮದಲ್ಲಿ ನಡೆದಿದೆ. ಮಂಗಳಮ್ಮ ಎಂಬುವರು ಗ್ರಾಮದ ಹೊರಭಾಗದಲ್ಲಿ ಹೊಸ ಮನೆಯೊಂದನ್ನು ನಿರ್ಮಿಸಿದ್ದು ಮನೆ ಸದಸ್ಯರು ಅಲ್ಲಿಯೇ ಮಲಗಿದ್ದರು. ಆಷಾಢ ನಿಮಿತ್ತ ಹಳೆ ಮನೆಯಲ್ಲಿದ್ದ ಸಾಮಾಗ್ರಿಗಳನ್ನು ಮಾತ್ರ ಸ್ಥಳಾಂತರಿಸಿರಲಿಲ್ಲ.

ಹೊಂಚು ಹಾಕಿದ್ದ ಕಳ್ಳರು ರಾತ್ರಿ ಮನೆಗೆ ನುಗ್ಗಿ ಬೀರುವನ್ನು ಹಾರೆಯಿಂದ ಮೀಟಿ ಹಣ ಹಾಗೂ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕಳ್ಳತನ ಮಾಡಿಕೊಂಡು ಹೋಗುವಾಗ ವಿಜಯಮ್ಮ ಎಂಬುವರಿಗೆ ಸೇರಿದ ಎರಡು ಮೇಕೆಗಳನ್ನು ಸಹ ಹೊತ್ತೊಯ್ದಿದ್ದಾರೆ. ಇಂದು ಬೆಳಗ್ಗೆ ಮಂಗಳಮ್ಮ ಹಳೆಯ ಮನೆಯ ಬಳಿ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಗುಬ್ಬಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು ,ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin