ಹಣ ಬ್ಲಾಕ್ ಅಂಡ್ ವೈಟ್ ಮಾಡುವ ವಿಚಾರ : ಆತ್ಮಹತ್ಯೆಗೆ ಯತ್ನಿಸಿದ್ದ ಅವಧೂತ ಸ್ವಾಮೀಜಿ ಬಚಾವ್

ಈ ಸುದ್ದಿಯನ್ನು ಶೇರ್ ಮಾಡಿ

Dattatreya-avadhoota

ಹುಬ್ಬಳ್ಳಿ ಡಿ.7-ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ದತ್ತಾತ್ರೇಯ ಅವಧೂತ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವರು ಹಳೇ ನೋಟುಗಳನ್ನು ಬದಲಿಸಿಕೊಡುವುದಾಗಿ ಹೇಳಿದ್ದ ದಾದಾಪೀರ್ ಬೂಸೆ ಒಂದು ಕೋಟಿ ರೂ. ಸ್ವಾಮೀಜಿಯಿಂದ ಪಡೆದು ಪರಾರಿಯಾಗಿದ್ದ.
ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರು ಬ್ಯಾಡಗಿಯಲ್ಲಿರುವ ದಾದಾಪೀರ್ ಮನೆ ಮುಂದೆ ಸತ್ಯಾಗ್ರಹ ಮಾಡಿದ್ದರು ಎನ್ನಲಾಗಿದ್ದು, ಸ್ವಾಮೀಜಿಗೆ ದಾದಾಪೀರ್ ಕೊಲೆ ಬೆದರಿಕೆ ಒಡ್ಡಿದ್ದ. ಇದರಿಂದ ಮನನೊಂದ ದತ್ತಾತ್ರೇಯ ಅವಧೂತ ಸ್ವಾಮೀಜಿ ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಕ್ರಮಕ್ಕೆ ಆಗ್ರಹ: 

ಸ್ವಾಮೀಜಿಯ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ಶ್ರೀ ಶರಣಬಸವೇಶ್ವರಮಠದ ಶ್ರೀ ಪ್ರಣಾವನಂದರಾಮ್ ಸ್ವಾಮೀಜಿ ಮಾಧ್ಯಮಗಳೊಂದಿಗೆ ಮಾತನಾಡಿ, ದಾದಾಪೀರ್‍ಬೂಸೆಯನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ದತ್ತಾತ್ರೇಯ ಅವಧೂತರ ಹಣವನ್ನು ವಾಪಸ್ ಕೊಡಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin