ಹನಿಟ್ರ್ಯಾಪ್ ಪ್ರಕರಣದಲ್ಲಿ ನೋಟೀಸ್ : ಪಿಎಸ್‍ಐ ಆತ್ಮಹತ್ಯೆಗೆ ಯತ್ನ

ಈ ಸುದ್ದಿಯನ್ನು ಶೇರ್ ಮಾಡಿ

poison--suicide

ಚಿಕ್ಕಮಗಳೂರು,ಮಾ.25-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಕಾಸ್ ನೋಟಿಸ್ ನೀಡಿದ್ದಾರೆಂದು ಎನ್‍ಆರ್‍ಪುರ ಠಾಣೆಯ ಮಹಿಳಾ ಪಿಎಸ್‍ಐ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪಿಎಸ್‍ಐ ಸುನೀತ ನಿದ್ರೆ ಮಾತ್ರೆ ಸೇವಿಸಿರುವ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪಕ್ಕದ ಮನೆಯವರು ಆಸ್ಪತ್ರೆಗೆ ದಾಖಲು ಮಾಡಲು ಮುಂದಾಗಿದ್ದು, ಆಸ್ಪತ್ರೆಗೆ ಹೋಗಲು ಅವರು ಒಪ್ಪದ ಹಠ ಮಾಡಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಸ್ಥಳಖೆ ಬಂದು ಮನವೊಲಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು ಎನ್ನಲಾಗಿದೆ.

ಜಿಲ್ಲೆಯಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣದ ಆರೋಪಿಗಳನ್ನು ಡಿಸಿಐಬಿ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಒಪ್ಪಿಸಿದ್ದರು. ಠಾಣೆ ಪೊಲೀಸರು ಇವರನ್ನು ಬಿಟ್ಟು ಕಳುಹಿಸಿದ್ದರು. ಹನಿಟ್ರ್ಯಾಪ್ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.   ಈ ಸಂಬಂಧ ಹೆಚ್ಚಿನ ತನಿಖೆಗಾಗಿ ಎಎಸ್‍ಪಿ ಅಣ್ಣಪ್ಪ ನಾಯ್ಕ್ ಅವರು ತನಿಖೆ ನಡೆಸಿ ವರದಿ ನೀಡುವಂತೆ ಎಸ್‍ಪಿ ಅಣ್ಣಾಮಲೈ ಸೂಚಿಸಿದ್ದರು. ತನಿಖೆ ನಡೆಸಿದ ಎಎಸ್‍ಪಿಯವರು ಪ್ರಕರಣದಲ್ಲಿ ವೃತ್ತ ನಿರೀಕ್ಷಕ ಮತ್ತು ಪಿಎಸ್‍ಐ ಅವರು ಕರ್ತವ್ಯ ಲೋಪವೆಸಗಿರುವುದು ಕಂಡುಬಂದಿತ್ತು.

ಈ ಹಿನ್ನೆಲೆಯಲ್ಲಿ ಎಸ್‍ಪಿಯವರು ಇವರಿಬ್ಬರಿಗೂ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಅಲ್ಲದೇ ತಪ್ಪು ಮಾಡಿರುವುದು ಸಾಬೀತಾದರೆ ಇವರಿಬ್ಬರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದರು. ಅಮಾನತ್ತಾಗುವು ಆತಂಕದಲ್ಲಿ ಪಿಎಸ್‍ಐ ಸುನೀತ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin