ಹನೂರಿನಲ್ಲಿ ಕಣಕ್ಕಿಳಿಯಲು ಬಯಸಿದ್ದೇನೆ. ಟಿಕೆಟ್ ಕೊಡುವುದು ಹೈಕಮಾಂಡ್‍ಗೆ ಬಿಟ್ಟದ್ದು : ಪರಿಮಳಾ ನಾಗಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Parimala-Nagappa--01

ಚಾಮರಾಜನಗರ, ಮಾ.16- ಬಿ.ಎಸ್.ಯಡಿಯೂರಪ್ಪನವರ ಕೈ ಬಲಪಡಸುವ ಸಲುವಾಗಿ ಬಿಜೆಪಿ ಸೇರುತ್ತಿದ್ದೇನೆ. ಹನೂರು ಕ್ಷೇತ್ರದಿಂದ ಕಣಕ್ಕಿಳಿಯಲು ನಾನು ಬಯಸಿದ್ದೇನೆ. ಆದರೆ ಟಿಕೆಟ್ ನೀಡುವುದು, ಬಿಡುವುದು ವರಿಷ್ಠರಿಗೆ ಬಿಟ್ಟಿದ್ದು ಎಂದು ಪರಿಮಳಾ ನಾಗಪ್ಪ ತಿಳಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಉಂಟಾಗುತ್ತಿರುವ ಬದಲಾವಣೆ, ಪ್ರಗತಿ ಮತ್ತು ಜನಸಾಮಾನ್ಯರ ಪರವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ನಾನು ಬಿಜೆಪಿಯನ್ನು ಸೇರುತ್ತಿದ್ದೇನೆ. ನನ್ನ ಭಾಗದ ಜನರ ಆಶಯ ಕೂಡ ಇದೇ ಆಗಿದೆ ಎಂದು ಅವರು ಹೇಳಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದಿಂದಲೇ ಸ್ಪರ್ಧಿಸುವ ಆಶಯ ಹೊಂದಿದ್ದೇನೆ. ಈಗಾಗಲೇ ಮಾಜಿ ಸಚಿವರು, ಬಿಜೆಪಿಯ ಮುಖಂಡರಾದ ಸೋಮಣ್ಣ ಅವರು ಕೂಡ ಇದೇ ಕ್ಷೇತ್ರದ ಆಕಾಂಕ್ಷಿಯಾಗಿದ್ದಾರೆ. ಆದರೆ ಅಂತಿಮವಾಗಿ ಯಾರಿಗೆ ಪಕ್ಷದ ವರಿಷ್ಠರು ಟಿಕೆಟ್ ನೀಡುತ್ತಾರೋ, ಅದಕ್ಕೆ ನಾನು ಬದ್ಧ ಎಂದು ಅವರು ತಿಳಿಸಿದ್ದಾರೆ.  ಈಗಾಗಲೇ ಪರಿಮಳಾ ನಾಗಪ್ಪ ಅವರು ಬಿಎಸ್‍ವೈ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದ ಬೆನ್ನ ಹಿಂದೆಯೇ ಮೇಲ್ಮನೆ ಸದಸ್ಯ ವಿ.ಸೋಮಣ್ಣ ಹನೂರು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು.   ಇದು ಪರಿಮಳಾ ನಾಗಪ್ಪ ಬಿಜೆಪಿಗೆ ಸೇರ್ಪಡೆಯಾದರೆ ಅದು ಎಲ್ಲಿ ತೊಡಕಾಗುತ್ತದೋ ಎಂಬ ಹಿನ್ನೆಲೆಯಲ್ಲಿ ಸೋಮಣ್ಣ ಮುನಿಸಿಕೊಂಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin