ಹಬ್ಬ,ಹರಿದಿನಗಳು ಸಂಸ್ಕೃತಿ, ಪರಂಪರೆಯ ಪ್ರತಿಬಿಂಬ

ಈ ಸುದ್ದಿಯನ್ನು ಶೇರ್ ಮಾಡಿ

sub-inspector

ಕೆ.ಆರ್.ಪೇಟೆ,ಅ.6- ಜಾತ್ರೆ-ಉತ್ಸವಗಳು ಹಾಗೂ ಹಬ್ಬ ಹರಿದಿನಗಳು ನಮ್ಮ ಸಂಸ್ಕೃತಿ -ಪರಂಪರೆಯ ಪ್ರತಿಬಿಂಬವಾಗಿವೆ. ಇವುಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಪಟ್ಟಣ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅರುಣ್‍ಕುಮಾರ್ ಹೇಳಿದರು. ತಾಲೂಕಿನ ಕೈಗೋನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಗಣೇಶೋತ್ಸವ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹೆಸರಿನಲ್ಲಿ ಜನರಿಂದ ಹಣ ವಸೂಲಿ ಮಾಡದೇ ಯುವಕರು ತಾವೇ ಒಂದಿಷ್ಟು ಹಣ ಕೂಡಿಸಿ ಸರಳವಾಗಿ ಅರ್ಥಪೂರ್ಣವಾಗಿ ಗಣೇಶ ಉತ್ಸವ ಮಾಡುವ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿರುವ ಕೈಗೋನಹಳ್ಳಿ ಯುವಕರ ಸಂಘಗಳಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಗಣಪತಿ ಉತ್ಸವ ಎಂದರೆ ಜನರಿಂದ ಬಲವಂತ ಹಣ ವಸೂಲಿ ಮಾಡುವ ಕಾರ್ಯಕ್ರಮ ಎಂಬುದಾಗಿತ್ತು ಆದರೆ ಯುವಕರು ಇದರಿಂದ ದೂರ ಸರಿದು ಒಳ್ಳೆಯ ಮಾರ್ಗದಲ್ಲಿ ಗಣೇಶ ಉತ್ಸವ ಮಾಡಿರುವುದು ಒಳ್ಳೆಯ ಬೆಳವಣಿಗೆ ಎಂದು ಅರುಣ್ ಕುಮಾರ್ ತಿಳಿಸಿದರು. ಮನ್‍ಮುಲ್ ನಿರ್ದೇಶಕ ಡಾಲು ರವಿ, ಮುಖ್ಯ ಗ್ರಾ.ಪಂ.ಸದಸ್ಯರಾದ ನಾರಾಯಣ್, ರವಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅನೇಕ ಸಾಧಕರನ್ನು ಸನ್ಮಾನಿಸಲಾಯಿತು.

 

► Follow us on –  Facebook / Twitter  / Google+

Facebook Comments

Sri Raghav

Admin