ಹರಪ್ಪನಹಳ್ಳಿ ಶಾಸಕ ರವೀಂದ್ರರ ಸ್ಥಿತಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

MP-Raveendra--01
ಬೆಂಗಳೂರು, ಜ.24- ಅನಾರೋಗ್ಯದಿಂದ ಬಳಲುತ್ತಿರುವ ಹರಪ್ಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರವೀಂದ್ರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಶ್ವಾಸಕೋಶ ಹಾಗೂ ಇತರೆ ಅಂಗಾಂಗಗಳ ಸೋಂಕಿನಿಂದಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಅವರಿಗೆ ನುರಿತ ವೈದ್ಯರ ಚಿಕಿತ್ಸೆ ನೀಡಲಾಗುತ್ತಿದ್ದು , ಕಳೆದ ರಾತ್ರಿಯಿಂದೀಚೆಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿದೇಶಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Facebook Comments

Sri Raghav

Admin