ಹಳೇ ಚಾಳಿ ಬಿಡದ ಶಾಸಕರು : ಅಧಿವೇಶನದ 6ನೇ ದಿನವೂ ಮುಂದುವರೆದ ಗೈರು ಹಾಜರಿ

ಈ ಸುದ್ದಿಯನ್ನು ಶೇರ್ ಮಾಡಿ

Session--001

ಬೆಂಗಳೂರು, ಜೂ.12-ಆರನೇ ದಿನವಾದ ಇಂದೂ ಸಹ ಅಧಿವೇಶನದಲ್ಲಿ ಶಾಸಕರ ಗೈರು ಹಾಜರಾತಿ ಎದ್ದು ಕಾಣುತ್ತಿತ್ತು. ಕಳೆದ ಒಂದು ವಾರದಿಂದ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಬೆರಳೆಣಿಕೆಯಷ್ಟು ಮಾತ್ರ ಸದಸ್ಯರು ಕಂಡು ಬಂದಿದ್ದು, ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ಪೈಕಿ ಬಹಳಷ್ಟು ಜನ ಗೈರು ಹಾಜರಾಗಿದ್ದರು. ಅದು ಇಂದೂ ಮುಂದುವರೆದಿದೆ.  ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಶೇ.25ಕ್ಕೂ ಕಡಿಮೆ ಸದಸ್ಯರು ಮಾತ್ರ ಸದನದಲ್ಲಿ ಹಾಜರಿದ್ದರು.

ಶನಿವಾರ ಮತ್ತು ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ತಮ್ಮ ಕ್ಷೇತ್ರಗಳಿಗೆ ತೆರಳಿದ್ದರಿಂದ ಗೈರು ಹಾಜರಾಗಿದ್ದರು ಎನ್ನಲಾಗಿದ್ದು, ಇದರೊಂದಿಗೆ ಇಂದು ನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಶಾಸಕರು ಈ ಕೆಲಸದಲ್ಲಿ ಮಗ್ನರಾಗಿದ್ದರಿಂದ ಸದನದಲ್ಲಿ ಸದಸ್ಯರ ಸಂಖ್ಯೆ ಕ್ಷೀಣಿಸಿತ್ತು.

ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನಕ್ಕೆ ತಪ್ಪದೇ ಹಾಜರಾಗುವಂತೆ ಸೂಚನೆ ಕೊಟ್ಟಿದ್ದರೂ ಸಹ ಇಂದು ಬಹುತೇಕ ಸದಸ್ಯರು ಗೈರು ಹಾಜರಾಗಿದ್ದರು. ಆರನೇ ದಿನವಾದ ಇಂದೂ ಸಹ ಸದನದಲ್ಲಿ ಪಾಲ್ಗೊಳ್ಳಳು ನಿರಾಸಕ್ತಿ ಹೊಂದಿದ್ದ ಸದಸ್ಯರಿಂದಾಗಿ ಯಥಾಸ್ಥಿತಿ ಮುಂದುವರೆದಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin