ಹಳೇ ದ್ವೇಷ : ಪೆಟ್ರೋಲ್ ಸುರಿದು ಬೆಂಕಿಹಚ್ಚಿ ವ್ಯಕ್ತಿ ಕೊಲೆಗೆ ಯತ್ನ

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ,ಫೆ.27- ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಶಾಂತವೀರಪ್ಪ ಎಂಬುವರು ಗಂಭೀರವಾಗಿ ಗಾಯಗೊಂಡು ಪ್ರಸ್ತುತ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಆರೋಪಿ ಗಿರೀಶ್ ಎಂಬಾತ ಪರಾರಿಯಾಗಿದ್ದಾನೆ. ಘಟನೆ ವಿವರ: ನಿನ್ನೆ ಸಂಜೆ ಶಾಂತವೀರಪ್ಪ ತನ್ನ ಬೈಕ್‍ಗೆ ಪೆಟ್ರೋಲ್ ತುಂಬಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಗಿರೀಶ ಏಕಾಏಕಿ ಅವರ ಮೇಲೆಯೇ ಪೆಟ್ರೋಲ್ ಚೆಲ್ಲಿ ಬೆಂಕಿ ಹಚ್ಚಿ ಓಡಿಹೋಗಿದ್ದಾನೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಶಾಂತವೀರಪ್ಪ ಕಿರಚಾಡುತ್ತಿದ್ದನ್ನು ನೋಡಿದ ಅಕ್ಕಪಕ್ಕದವರು ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಪ್ರಸ್ತುತ ಎರಡು ಕಾಲುಗಳು , ಮೈನ ಕೆಲ ಭಾಗ ಸುಟ್ಟುಹೋಗಿದ್ದು , ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin