ಹಳೇ ದ್ವೇಷ  ವ್ಯಕ್ತಿ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

murder-6
ತುಮಕೂರು, ಫೆ.4- ಹಳೇ ದ್ವೇಷ  ಹಿನ್ನಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ಸಿದ್ದರಾಮಯ್ಯ (58) ಎಂಬುವವರೇ ಕೊಲೆಯಾದ ವ್ಯಕ್ತಿಯಾಗಿದ್ದು, ಚಿಕ್ಕನಾಯಕನಹಳ್ಳಿ ತಾಲೂಕು ಶೆಟ್ಟಿಕೆರೆ ಹೋಬಳಿ ಗೋಡೆಕೆರೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ತಾಲೂಕು ಕಚೇರಿ ಹಾಗೂ ಮತ್ತಿತರೆ ಕಡೆಗಳಲ್ಲಿ ಸ್ಟಾಂಪ್ ವೆಂಡರ್ ಕೆಲಸ ಮಾಡುತ್ತಿದ್ದ ಬಸವರಾಜು ಎಂಬುವವರು ತನ್ನ ಪಕ್ಕದ ಮನೆಯ ಸಿದ್ದರಾಮಯ್ಯ ಅವರೊಂದಿಗೆ ನಿವೇಶನಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಜಗಳ ತೆಗೆಯುತ್ತಿದ್ದನೆನ್ನಲಾಗಿದೆ.ಕಳೆದ ರಾತ್ರಿ ತೋಟದಲ್ಲಿ ಸಿದ್ದರಾಮಯ್ಯ ಬೇಲಿ ಹಾಕುವ ಸಂದರ್ಭದಲ್ಲಿ ಬಸವರಾಜು ಮತ್ತು ಮಕ್ಕಳು ಅವರನ್ನು ಮನೆಗೆ ಕರೆದೊಯ್ದು ರಾಡಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ.ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂಬಂಧ ಆರೋಪಿಗಳಾದ ಬಸವರಾಜು (65), ಮಕ್ಕಳಾದ ದರ್ಶನ್ (ಧರ್ಮ) (30), ಚೇತನ(28) ವಿಜಯಕುಮಾರಿ, ಮತ್ತು ಪವಿತ್ರ ಎಂಬುವವರನ್ನು ಬಂಧಿಸಿ ಮೊ.ನಂ.5/17 ಐಪಿಸಿ ಸೆಕ್ಷನ್ 323 324 504 302 ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin