ಹಳೇ ನೋಟು ನಿಷೇಧಿಸಿ 6 ತಿಂಗಳು ಕಳೆದರೂ ಜನರ ಪರದಾಟ ಮಾತ್ರ ತಪ್ಪಿಲ್ಲ : ಖರ್ಗೆ ಟೀಕೆ

ಈ ಸುದ್ದಿಯನ್ನು ಶೇರ್ ಮಾಡಿ

ATM-01

ಕಲಬುರಗಿ,ಏ.24-ಹಳೇ ನೋಟುಗಳನ್ನು ನಿಷೇಧಿಸಿ ಆರು ತಿಂಗಳು ಕಳೆದರೂ ಜನರ ಪರದಾಟ ಮಾತ್ರ ತಪ್ಪಿಲ್ಲ. ಎಟಿಎಂಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದರ ಬಗ್ಗೆ ಕೇಂದ್ರ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನು ಕೂಡ ಹಲವೆಡೆ ಹಳೆ ನೋಟು ದಂಧೆ ನಡೆಯುತ್ತಿದೆ ಎಂದು ಬಿಂಬಿಸಿ ಜನರನ್ನು ಮರಳು ಮಾಡುವ ತಂತ್ರ ನಡೆಯುತ್ತಿದೆ. ಆದಾಯ ತೆರಿಗೆ ಇಲಾಖೆ ಕೇವಲ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿದೆ. ಇದು ದುರದ್ದೇಶದಿಂದ ಕೂಡಿದ ನಡೆ ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ.ಪ್ರಸ್ತುತ ಹಲವು ರಾಜ್ಯಗಳ ಚುನಾವಣೆಗಳು ಹತ್ತಿರ ಬರುತ್ತಿದ್ದು , ವಿರೋಧ ಪಕ್ಷದವರ ಮೇಲೆ ತಪ್ಪು ಭಾವನೆ ಮೂಡಿಸಲು ಆದಾಯ ತೆರಿಗೆ ಇಲಾಖೆ ಸೇರಿದಂತೆ ಹಲವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ನಮ್ಮ ಯುಪಿಎ ಸರ್ಕಾರದಲ್ಲಿ ಮಾಡಿದ ಅಭಿವೃದ್ದಿ ಕಾರ್ಯಗಳನ್ನು ಮೋದಿ ನಮ್ಮದೆಂದು ಹೇಳಿ ಲಾಭ ಪಡೆಯಲು ಪ್ರಯಿತ್ನಿಸುತ್ತಿದ್ದಾರೆ ಎಂದು ಗುಡುಗಿದ್ದಾರೆ. ಇದೇ ವೇಳೆ ವಾಡಿ-ಗದಗ ರೈಲ್ವೆ ಮಾರ್ಗದ ಕುರಿತು ಕೇಂದ್ರ ಸರ್ಕಾರ ಹಾಗೂ ರೈಲ್ವೆ ವಿಭಾಗೀಯ ಕೇಂದ್ರದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ನಾನು ರೈಲ್ವೆ ಸಚಿವನಾಗಿದ್ದಾಗ ಇದಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಇಂದಿನ ಮೋದಿ ಸರ್ಕಾರ ನಿರ್ಲಕ್ಷ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin