ಹಸುಗೂಸಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ

ಈ ಸುದ್ದಿಯನ್ನು ಶೇರ್ ಮಾಡಿ

hanging -suicide

ಗದಗ, ಏ.5- ಐದು ತಿಂಗಳ ಹಸುಗೂಸಿಗೆ ನೇಣು ಬಿಗಿದು ಮಹಿಳೆ ತಾನೂ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶೃತಿ ಗೋವಿಂದೇಗೌಡ, ಶಶಾಂಕ್‍ಗೌಡ ಮೃತ ದುರ್ದೈವಿಗಳು. ಪತಿಯು ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬ ವಿಷಯವಾಗಿ ಕುಟುಂಬದಲ್ಲಿ ಆಗಾಗ ಜಗಳವಾಗುತ್ತಿತ್ತು. ಇದರಿಂದ ಮನನೊಂದ ಶೃತಿ ತವರೂರಾದ ಜಿಲ್ಲೆಯ ಶ್ಯಾಗೋಟಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶೃತಿ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಪತಿಯ ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದಾಳೆ. ಶೃತಿ ಪೋಷಕರು ಗಂಡನ ಮನೆಯವರ ವಿರುದ್ಧ ಆರೋಪಿಸಿದ್ದಾರೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin