ಹಾವು ಕಚ್ಚಿ ರೈತ ಕಾರ್ಮಿಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

farmers

ಮಂಡ್ಯ,ಸೆ.23-ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುವ ಸಂದರ್ಭ ರೈತ ಕಾರ್ಮಿಕನೊಬ್ಬ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ಸಂಭವಿಸಿದೆ. 48 ವರ್ಷದ ಚೆನ್ನೈಗೌಡ ಎಂಬ ವ್ಯಕ್ತಿ ಕುಮಾರ್ ಎಂಬುವರ ಕಬ್ಬಿನ ಗದ್ದೆಯಲ್ಲಿ ನಿನ್ನೆ ಮಧ್ಯಾಹ್ನ ಕೆಲಸ ಮಾಡುತ್ತಿದ್ದಾಗ ಅವರಿಗೆ ಹಾವು ಕಚ್ಚಿದೆ. ತೀವ್ರ ಅಸ್ವಸ್ಥರಾದ ಅವರನ್ನು ತಕ್ಷಣ ಪಾಂಡವಪುರ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೆನ್ನೈಗೌಡ ಪತ್ನಿ(ಮೀನಾಕ್ಷಿ) ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

 

► Follow us on –  Facebook / Twitter  / Google+

 

 

Facebook Comments

Sri Raghav

Admin