ಹಾಸನ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಫೆ.25- ಹೇಮಾವತಿ ಅಣೆಕಟ್ಟೆಯಿಂದ ಕೆಆರ್‍ಎಸ್‍ಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಜೆಡಿಎಸ್ ಹಾಗೂ ವಿವಿಧ ಸಂಘಟನೆಗಳು ಇಂದು ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.ಜಿಲ್ಲೆಯ ಎಂಟು ತಾಲ್ಲೂಕುಗಳು ಬರದಿಂದ ತತ್ತರಿಸಿದ್ದು, ಕುಡಿಯುವ ನೀರಿಗಾಗಿ ಹಾಹಕಾರ ಸೃಷ್ಟಿಯಾಗಿದೆ. ಹೇಮಾವತಿ ಜಲಾಶಯವು 37.103ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯವನ್ನು ಹೊಂದಿದೆ. ಇದರಲ್ಲಿ ಪ್ರಸ್ತುತ 4.52 ಟಿಎಂಸಿ ಮಾತ್ರ ನೀರಿದ್ದು ಅದರಲ್ಲಿ 4 ಟಿಎಂಸಿ ಡೆಡ್ ಸ್ಟೋರೇಜ್ ನೀರಾಗಿದೆ.ಇನ್ನುಳಿದ ಕೇವಲ 0.52 ಟಿಎಂಸಿ ನೀರು ಮಾತ್ರ ಬಳಕೆಗೆ ಸಿಗುತ್ತದೆ. ಇದು ಈ ಜಿಲ್ಲೆಯ ಕುಡಿಯುವ ನೀರಿಗೂ ಸಾಲದೆ ಹೋಗುತ್ತದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಸಲುವಾಗಿ ಹೇಮಾವತಿಯಿಂದ ಕೆಆರ್‍ಎಸ್‍ಗೆ ನೀರು ಹರಿಸುತ್ತಿರುವುದು ಸರಿಯಲ್ಲ ಸರ್ಕಾರ ಕೂಡಲೇ ಎಚ್ಚೆತ್ತು ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ತಮ್ಮ ಆಕ್ರೋಶ ಹೊರ ಹಾಕಿದರು.

ಬಂದ್ ವೇಳೆ ನಗರದ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದು, ಸಾರಿಗೆ ಬಸ್, ಆಟೋ, ಲಾರಿ ಹಾಗೂ ಇನ್ನಿತರೆ ವಾಹಗಳು ಸಂಚರಿಸುತ್ತಿದ್ದವು. ಜನಜೀವನದ ಮೇಲೆ ಬಂದ್‍ನಿಂದ ಯಾವುದೇ ಪರಿಣಾಮ ಬೀರಲಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.  ಜೆಡಿಎಸ್ ಕರೆ ನೀಡಿದ್ದ ಬಂದ್‍ಗೆ ರೈತಸಂಘ, ಡಾ.ರಾಜ್ ಅಭಿಮಾನಿಗಳ ಸಂಘ, ಕರವೇ ಸಂಘಟನೆ ಸೇರಿದಂತೆ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದವು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin