ಹಾಸ್ಟೆಲ್‍ನಲ್ಲಿ ವಿಷಾಹಾರ ಸೇವಿಸಿ 12ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಈ ಸುದ್ದಿಯನ್ನು ಶೇರ್ ಮಾಡಿ

Hostel--01

ಚಿಕ್ಕಬಳ್ಳಾಪುರ, ಆ.10- ವಿಷಾಹಾರ ಸೇವಿಸಿ 12ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಚಿಂತಾಮಣಿ ತಾಲೂಕಿನ ರಾಗುಟ್ಟಹಳ್ಳಿ ಸರ್ಕಾರಿ ಬಾಲಕರ ಹಾಸ್ಟೆಲ್‍ನಲ್ಲಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ನಲ್ಲಿ ಕಳೆದ ರಾತ್ರಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಮಧ್ಯರಾತ್ರಿ ಹೊಟ್ಟೆನೋವು, ವಾಂತಿ-ಭೇದಿಯಿಂದ ಒದ್ದಾಡುತ್ತಿದ್ದರು. ಇದನ್ನು ಕಂಡ ಹಾಸ್ಟೆಲ್ ಸಿಬ್ಬಂದಿ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಸೇವಿಸಿದ ಆಹಾರ ಫುಡ್ ಪಾಯಿಸನ್ ಆಗಿ ಈ ರೀತಿ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳ ಹಾಸ್ಟೆಲ್‍ಗಳಲ್ಲಿ ಫುಡ್‍ಪಾಯಿಸನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹಾಸ್ಟೆಲ್‍ಗಳಿಗೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಲೋಪದೋಷ ಇದೆಯೇ ಎಂಬುದು ಪ್ರಶ್ನೆಯಾಗಿದೆ.

Hostel  01

Hostel  03

Hostel;  02

 

Facebook Comments

Sri Raghav

Admin