ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಉಗ್ರಗಾಮಿಗಳ ಅಟ್ಟಹಾಸ : ಮೂವರು ಯೋಧರ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Terroris-tr

ಶ್ರೀನಗರ, ಆ.17-ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಉಗ್ರಗಾಮಿಗಳ ಅಟ್ಟಹಾಸ ಮುಂದುವರೆದಿದ್ದು, ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಸಾವಿಗೀಡಾಗಿ ಇತರ ಮೂವರು ತೀವ್ರ ಗಾಯಗೊಂಡಿದ್ದಾರೆ. ಕಾಶ್ಮೀರ ಕಣಿವೆಯ ಬಾರಾಮುಲ್ಲಾದ ಕ್ವಾಜಾಬಾಗ್ನಲ್ಲಿ ಮುಂಜಾನೆ 2.30ರಲ್ಲಿ ಈ ಘಟನೆ ನಡೆದಿದೆ. ರಸ್ತೆ ಪಕ್ಕದಲ್ಲಿ ಅಡಗಿ ಕುಳಿತಿದ್ದ ಉಗ್ರರು ಸೇನಾ ವಾಹನದ ಮೇಲೆ ಗುಂಡಿನ ಮಳೆಗರೆದರು.  ಈ ದಾಳಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಮತ್ತು ಓರ್ವ ಪೊಲೀಸ್ ಹತರಾಗಿದ್ದು, ಇತರ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಉಗ್ರಗಾಮಿಗಳ ಬೇಟೆ ಭದ್ರತಾ ಸಿಬ್ಬಂದಿ ವ್ಯಾಪಕ ಶೋಧ ಕೈಗೊಂಡಿದ್ದಾರೆ. ಏತನ್ಮಧ್ಯೆ, ಜಮ್ಮು-ಕಾಶ್ಮೀರದ ವಿವಿಧೆ ಇಂದು ಕೂಡ ಸತತ 40ನೇ ದಿನವೂ ಕರ್ಫ್ಯೂ ಮುಂದುವರೆದಿದೆ.

► Follow us on –  Facebook / Twitter  / Google+

Facebook Comments

Sri Raghav

Admin