ಹಿಂಸಾಚಾರ ಶಮನಗೊಳಿಸಲು ಕಾಶ್ಮೀರದಲ್ಲಿ ರಾಜನಾಥ್ ಚರ್ಚೆಗೆ ವೇದಿಕೆ ಸಜ್ಜು

ಈ ಸುದ್ದಿಯನ್ನು ಶೇರ್ ಮಾಡಿ

S Rajanath-Singh

ಶ್ರೀನಗರ, ಆ.24- ಜಮ್ಮು ಮತ್ತು ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರವನ್ನು ಶಮನಗೊಳಿಸಿ ಅಲ್ಲಿ ಶಾಂತಿ ಪರಿಸ್ಥಿತಿ ನೆಲೆಸುವ ನಿಟ್ಟಿನಲ್ಲಿ ಅಲ್ಲಿನ ಮುಖಂಡರ ಜತೆ ಚರ್ಚಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶ್ರೀನಗರದಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ವಿಶೇಷ ವಿಮಾನದಲ್ಲಿ ಇಂದು ಬೆಳಗ್ಗೆ 11.30ರಲ್ಲಿ ಶ್ರೀನಗರಕ್ಕೆ ರಾಜನಾಥ್ಸಿಂಗ್ ಮತ್ತು ಗೃಹ ಕಾರ್ಯದರ್ಶಿ ರಾಜೀವ್ ಮೆಹರಿಷಿ ಅವರು ಆಗಮಿಸಿದರು.  ಕಾಶ್ಮೀರ ಕಣಿವೆಯಲ್ಲಿ ಎರಡು ದಿನಗಳ ಭೇಟಿಗೆ ಆಗಮಿಸಿರುವ ಗೃಹ ಸಚಿವರು ವಿವಿಧ ಪಕ್ಷಗಳ ಮುಖಂಡರು ಮತ್ತು ಪ್ರತ್ಯೇಕತಾವಾದಿ ಬಣದೊಂದಿಗೆ ಮಾತುಕತೆ ನಡೆಸಲಿದ್ದಾರೆ.  ಈ ಮಧ್ಯೆ ಕಾಶ್ಮೀರದ ದಕ್ಷಿಣ ಭಾಗದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಹಿಂಸಾಚಾರದಲ್ಲಿ ಸತ್ತವರ ಸಂಖ್ಯೆ 66ಕ್ಕೆ ಏರಿದೆ. ಕೆಲವು ಭಾಗಗಳಲ್ಲಿ ಕರ್ಫ್ಯೂ ಮುಂದುವರಿಸಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin