ಹಿರಿಯೂರಿನಲ್ಲಿ ಶೀಘ್ರ ಹೈಟೆಕ್ ಆಸ್ಪತ್ರೆ

ಈ ಸುದ್ದಿಯನ್ನು ಶೇರ್ ಮಾಡಿ

hiriyuru--hospatre

ಹಿರಿಯೂರು, ಆ.20-ನಗರದಲ್ಲಿ ಆಧುನಿಕ ಸವಲತ್ತುಗಳುಳ್ಳ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರವೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ಡಿ.ಸುಧಾಕರ್ ಹೇಳಿದರು.ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆಗಳ ಕಾಯಕಲ್ಪಕ್ಕೆ ಅಗತ್ಯ ನೆರವು ಒದಗಿಸುವ ಯೋಜನೆಯನ್ನು ರೂಪಿಸಿದ್ದು ಇದು ಸದ್ಬಳಕೆಯಾಗಬೇಕು ಎಂದು ಹೇಳಿದರು.

ಹರೀಶ್ ಸಾಂತ್ವನ ಯೋಜನೆಯು ರಾಷ್ಟ್ರದಲ್ಲಿಯೇ ಅಪರೂಪದ ಯೋಜನೆಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಅಫಘಾತಗಳ ಸಂದರ್ಭದಲ್ಲಿ ತುರ್ತು ಸೇವೆ ನೀಡಲು ಘಟಕ ಆರಂಭಿಸಲಾಗುತ್ತಿದೆಯೆಂದರು. ನಗರದ ವಾಣಿ ಸಕ್ಕರೆ ಕಾರ್ಖಾನೆ ಬಳಿ 15 ಎಕರೆ ವಿಸ್ತಾರ ಪ್ರದೇಶದಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣದ ನೀಲ ನಕ್ಷೆ ಸಿದ್ಧಗೊಂಡಿದ್ದು, ಸದರಿ ಭೂಮಿಯನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿ, ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದೆಂದು ತಿಳಿಸಿದರು.ಜಿಲ್ಲಾ ಉಪ ವಿಭಾಗದಿಕಾರಿ ರಾಘವೇಂದ್ರ, ನಗರಸಭೈ ಅದ್ಯಕ್ಷ ಈ.ಮಂಜುನಾಥ್, ಉಪಾಧ್ಯಕ್ಷೆ ಲಕ್ಷ್ಮಿದೇವಿ, ತಾಲ್ಲೂಕು ಪಂಚಾಯಿತಿ ಅದ್ಯಕ್ಷ ಚಂದ್ರಪ್ಪ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವ್ಯೆದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್, ತಾಲ್ಲೂಕು ಅರೋಗ್ಯಾಧಿಕಾರಿ ಡಾ.ರಂಗನಾಥ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಖಾದಿ ರಮೇಶ್, ಕಲ್ಲಟ್ಟಿ ತಿಪ್ಪೇಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin