ಹಿರಿಯ ಪತ್ರಕರ್ತ ಶಿವಲಿಂಗಪ್ಪ ಇನ್ನಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

shivalingappa
ದಾವಣಗೆರೆ, ಜ.9-
ದಾವಣಗೆರೆ ಟೈಮ್ಸ್ ದಿನಪತ್ರಿಕೆ ವ್ಯವಸ್ಥಾಪಕ ಸಂಪಾದಕರಾಗಿದ್ದ ಹಿರಿಯ ಪತ್ರಕರ್ತ ಜಿ.ಬಿ.ಶಿವಲಿಂಗಪ್ಪ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಮತ್ತು ಅಪಾರ ಬಂಧು-ಬಳಗವನ್ನು ಅಗಲಿರುವ ಶಿವಲಿಂಗಪ್ಪ ಕಲಾವಿದರ ಸಂಘದ ಅಧ್ಯಕ್ಷರಾಗಿ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.  ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶಿವಲಿಂಗಪ್ಪ ನಿಧನಕ್ಕೆ ಪತ್ರಕರ್ತ ಹನುಮಂತಪ್ಪ ಹಾಲಿವಾಣ, ವಿಷ್ಣುವರ್ಧನ್ ಸಂಘದ ಅಧ್ಯಕ್ಷ ವಿ.ತಿರುಮಲೇಶ್, ನಂದಕುಮಾರ್ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಇಲ್ಲಿನ ವೀರಶೈವ ರುದ್ರಭೂಮಿಯಲ್ಲಿ ನಡೆಯಿತು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin