ಹುತಾತ್ಮನಿಗೆ ಅಂತಿಮ ನಮನ : ಸರ್ಕಾರಿ ಗೌರವದೊಂದಿಗೆ ರಾಜೇಶ್‍ ಅಂತ್ಯಕ್ರಿಯೆ

ಈ ಸುದ್ದಿಯನ್ನು ಶೇರ್ ಮಾಡಿ

Kolar

ಕೋಲಾರ, ಆ.7-  ಉಗ್ರರ ಗುಂಡಿನ ದಾಳಿಗೆ ಬಲಿಯಾದ ಯೋಧ ರಾಜೇಶ್‍ನ ಪಾರ್ಥೀವ ಶರೀರವನ್ನು ಮುಂಜಾನೆ 3 ಗಂಟೆ ಸುಮಾರಿಗೆ ಹುಟ್ಟೂರಾದ ತಾಲ್ಲೂಕಿನ  ಕಿತ್ತಂಡೂರು ಗ್ರಾಮಕ್ಕೆ ತರಲಾಗಿದ್ದು, ಕುಟುಂಬದವರು, ಬಂಧುಮಿತ್ರರ ಆಕ್ರಂದನದ ನಡುವೆ ಅಂತ್ಯಕ್ರಿಯೆ ನೆರವೇರಿಸಲಾಯಿತು.   ಗ್ರಾಮದಲ್ಲಿ ನೀರವಮೌನ ಆವರಿಸಿದ್ದು , ಸಾರ್ವಜನಿಕರು, ಶಾಲಾ ಮಕ್ಕಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಯೋಧನನಿಗೆ ಅಂತಿಮ ನಮನ ಸಲ್ಲಿಸಿದರು. ಇದರ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.

Kolar-1

ಉಸ್ತುವಾರಿ ಸಚಿವ ರಮೇಶ್ ಕುಮಾರ್, ಶಾಸಕ ವರ್ತೂರು ಪ್ರಕಾಶ್, ಮಾಜಿ ಸಚಿವ ಶ್ರೀನಿವಾಸ್‍ಗೌಡ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಲಹಳ್ಳಿ ಗೋವಿಂದಗೌಡ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.  ಯೋಧನಿಗೆ ಸರ್ಕಾರಿ ಗೌರವಗಳೊಂದಿಗೆ ಮೂರು ಸುತ್ತು ಗುಂಡು ಹಾರಿಸಿ ನಮನ ಸಲ್ಲಿಸಲಾಯಿತು.

► Follow us on –  Facebook / Twitter  / Google+

 

Facebook Comments

Sri Raghav

Admin