ಹುದ್ದೆಯಿಂದ ಕೆಳಗಿಳಿಯುವಂತೆ ಆರ್‍ಬಿಐ ಗವರ್ನರ್‍ಗೆ ಬೆದರಿಕೆ ಹಾಕಿದ್ದ ಆರೋಪಿ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

urjithpatel

ಮುಂಬೈ, ಮಾ.5-ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಹುದ್ದೆಯಿಂದ ಕೆಳಗಿಳಿಯುವಂತೆ ಊರ್ಜಿತ್ ಪಟೇಲ್ ಅವರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ನಾಗ್ಪುರದಲ್ಲಿ ಬಂಧಿಸಿದ್ದಾರೆ.  ಆರ್‍ಬಿಐ ಗವರ್ನರ್ ಪಟೇಲ್ ಅವರಿಗೆ ಫೆ.23ರಂದು ಇಮೇಲ್ ಕಳುಹಿಸಿದ್ದ 37 ವರ್ಷದ ವ್ಯಕ್ತಿ ಈ ಕೂಡಲೇ ನೀವು ಹುದ್ದೆಯಿಂದ ಕೆಳಗಿಳಿಯಬೇಕು. ಇಲ್ಲದಿದ್ದರೆ ನಿಮ್ಮ ಮತ್ತು ನಿಮ್ಮ ಕುಟುಂಬದ ಸದಸ್ಯರ ಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಬೆದರಿಕೆ ಹಾಕಿದ್ದ. ಈ ಸಂಬಂಧ ದೂರು ದಾಖಲಾಗಿತ್ತು. ಮುಂಬೈ ಪೊಲೀಸ್ ಇಲಾಖೆಯ ಸೈಬರ್ ಘಟಕದ ತಂಡ ನಾಗ್ಪುರದಲ್ಲಿ 37 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin