ಹುಬ್ಬಳ್ಳಿಯಲ್ಲಿ ಎಚ್‍ಡಿಕೆ ‘ಗೃಹ ಪ್ರವೇಶ’ : ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಹೊಸ ಶಕೆ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

HDK-4 ಹುಬ್ಬಳ್ಳಿ, ನ.18- ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿಯೇ ಮನೆ ಮಾಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಇಂದು ತಮ್ಮ ನೂತನ ಮನೆಯ ಗೃಹ ಪ್ರವೇಶ ಮಾಡಿದರು. ದಂಪತಿ ಸಮೇತರಾಗಿ ಆಗಮಿಸಿದ ಎಚ್‍ಡಿಕೆ ಗೋ ಪೂಜೆ ಮೂಲಕ ಗೃಹ ಪ್ರವೇಶ ಮಾಡಿದರು.  ನಂತರ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಹೊಸ ರಾಜಕೀಯ ಶಕೆ ಆರಂಭವಾಗಿದೆ. ಈ ಭಾಗದ ಜನರ ನೇರ ಸಂಪರ್ಕದಲ್ಲಿ ಇರಬೇಕು ಎಂಬ ಉದ್ದೇಶದಿಂದ ಇಲ್ಲಿ ಮನೆ ಮಾಡಿದ್ದೇನೆ.

HDK-1 ಕಷ್ಟ ಹೇಳಿಕೊಂಡು ಬರುವವರಿಗೆ ಸದಾ ನನ್ನ ಮನೆ ಬಾಗಿಲು ತೆರೆದಿರುತ್ತದೆ. ನಾನು ಇಲ್ಲಿರುವುದರಿಂದ ಜೆಡಿಎಸ್ ಕಾರ್ಯಕರ್ತರರಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಜನರು ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

HDK-3

ನಮ್ಮ ಪಕ್ಷದ ಬೇರುಗಳು ಉತ್ತರ ಕರ್ನಾಟಕದಲ್ಲಿ ಬಲವಾಗಿವೆ. ಅವುಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇಂದಿನಿಂದಲೇ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಆರಂಭಿಸುತ್ತೇನೆ ಎಂದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಈ ಭಾಗದಲ್ಲಿ ಕನಿಷ್ಟ 40 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ ಅವರು, ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣ ಮನ್ನ ಮಾಡುವುದಾಗಿ ಭರವಸೆ ನೀಡಿದರು. ರಾಜ್ಯ ಸರ್ಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈರುಳ್ಳಿ, ದಾಳಿಂಬೆ, ಭತ್ತ ಬೆಳೆಗಾರರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿದರು. ಇದೇ 21 ರಿಂದ ಆರಂಭವಾಗುವ ಅಧಿವೇಶನಕ್ಕೆ ಈ ನೂತನ ಮನೆಯಿಂದಲೇ ತೆರಳುವುದಾಗಿ ಸುದ್ದಿಗಾರರ ಪ್ರಶ್ನೆಗಳಿಗೆ  ಪ್ರತಿಕ್ರಿಯಿಸಿದರು.

► Follow us on –  Facebook / Twitter  / Google+

HDK-5

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin