ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ ಇಂದು ಹೆಚ್ಡಿಕೆ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy

ಬೆಂಗಳೂರು, ಸೆ.21-ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ ಇಂದು ಸಂಜೆ ಖಾಸಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ.ಕಳೆದ 10 ವರ್ಷಗಳ ಹಿಂದೆ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿ ಟಿಶ್ಯೂವಾಲ್ವ್ ಅಳವಡಿಸಲಾಗಿದ್ದು, ಅದರ ಕಾಲಾವಧಿ ಪೂರ್ಣಗೊಂಡಿದ್ದು, ಬದಲಿಸಬೇಕೆಂದು ವೈದ್ಯರು ತಿಳಿಸಿರುವುದರಿಂದ ಸೆ.23 ರಂದು ಕುಮಾರಸ್ವಾಮಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಅವರನ್ನು ವೈದ್ಯರು ತಪಾಸಣೆ ನಡೆಸಿದ್ದು, ಅಮೆರಿಕಾದ ತಜ್ಞ ವೈದ್ಯರ ಸಲಹೆಯನ್ನು ಪಡೆದಿದ್ದಾರೆ. ಶಸ್ತ್ರ ಚಿಕಿತ್ಸೆ ನಂತರ 2 ವಾರಗಳ ಕಾಲ ವಿಶ್ರಾಂತಿ ಪಡೆಯಬೇಕಾಗಿದೆ. ಹಾಗಾಗಿ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಕಳೆದ 7-8 ತಿಂಗಳಿಂದ ಎಚ್.ಡಿ.ಕುಮಾರಸ್ವಾಮಿ ಅವರು ಕಫದ ಸಮಸ್ಯೆಯಿಂದ ಬಳಲುತ್ತಿದ್ದರು. ಇದರ ಒತ್ತಡ ಹೃದಯದ ಮೇಲೆ ಉಂಟಾಗಿದ್ದರಿಂದ ವಾಲ್ವ್ ಅನ್ನು ಒದಗಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments

Sri Raghav

Admin