ಹೆಚ್ಚುತ್ತಿರುವ ಚಿರತೆ ಹಾವಳಿ ತಪ್ಪಿಸಲು ಅರಣ್ಯಾಧಿಕಾರಿಗಳಿಗೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

chirate

ತಿಪಟೂರು. ಅ.27- ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ, ಹೆಚ್. ಭೈರಾಪುರ, ಮುದ್ದೇನಹಳ್ಳಿ ತಾಂಡ್ಯದಲ್ಲಿ ನಿರಂತರವಾಗಿ ಚಿರತೆ ದಾಳಿ ನಡೆಯುತ್ತಿದ್ದು, ಗ್ರಾಮಸ್ಥರು ತಮ್ಮ ಹೊಲ, ತೋಟಗಳಿಗೆ ಹೋಗಲು ಅಂಜುವಂತಾಗಿದೆ. ಕೂಡಲೇ ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ವೀರ ಸಮರಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಪದಾಧಿಕಾರಿಗಳು, ಈ ಹಿಂದೆ ಹತ್ತಾರು ಕುರಿ, ಮೇಕೆ, ಹಸುಗಳನ್ನು ಚಿರತೆ ತಿಂದಿದ್ದು, ಗ್ರಾಮಸ್ಥರು ದೂರದ ಹೊಲ ತೋಟಗಳಿಗೆ ನೀರು ಹಾಯಿಸಲು ಹಾಗೂ ತಮ್ಮ ದನ, ಕುರಿ, ಮೇಕೆಗಳನ್ನು ಮೇಯಿಸಲು ಮತ್ತು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಹೆದರುತ್ತಿದ್ದಾರೆ ಎಂದು ಹೇಳಿದರು. ಆದ್ದರಿಂದ ಅರಣ್ಯ ಇಲಾಖೆ ಇತ್ತ ಗಮನಹರಿಸಿ ಚಿರತೆ ಹಾವಳಿ ತಡೆಗಟ್ಟಿ ಜನರು ನಿರ್ಭಯದಿಂದ ಓಡಾಡುವಂತೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin