ಹೆಚ್ಚುವರಿ ಬಸ್‍ಗೆ ಆಗ್ರಹಿಸಿ ಕರವೇ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

beluru protest

ಬೇಲೂರು, ಆ.30- ಹಾಸನ ಹಾಗೂ ಚಿಕ್ಕಮಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಿಂದ ಪ್ರಯಾಣಿಸುತ್ತಾರೆ. ಆದರೆ ಸರಿಯಾದ ಸಮಯಕ್ಕೆ ಬಸ್‍ಗಳಿಲ್ಲದೆ, ನಿಗದಿತ ಸಮಯಕ್ಕೆ ಶಾಲಾ-ಕಾಲೇಜುಗಳಿಗೆ ತೆರಳಲು ಸಾಧ್ಯವಾಗದ ಕಾರಣ ಹೆಚ್ಚಿನ ಬಸ್‍ಗಳನ್ನು ಬಿಡಬೇಕು ಎಂದು ಒತ್ತಾಯಿಸಿ ಕರವೇ ಬಸ್‍ಗಳನ್ನು ತಡೆದು ಪ್ರತಿಭಟಿಸಿತು.ಈ ವೇಳೆ ಮಾತನಾಡಿದ ಬಣದ ತಾಲೂಕು ಅಧ್ಯಕ್ಷ ವಿ.ಎಸ್.ಭೋಜೇಗೌಡ, ತಾಲೂಕಿನ ನಾನಾ ಭಾಗಗಳಿಂದ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಹಾಸನ ಹಾಗೂ ಚಿಕ್ಕಮಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ಹೋಗುತ್ತಾರೆ. ಆದರೆ ಬೆಳಗಿನ ಸಮಯದಲ್ಲಿ ಹೆಚ್ಚಿನ ಬಸ್‍ಗಳ ಸೌಲಭ್ಯಗಳಿಲ್ಲದ್ದರಿಂದ ಬರುವ ಬಸ್‍ಗಳಲ್ಲೆ ಸಾಕಷ್ಟು ವಿದ್ಯಾರ್ಥಿಗಳು ಹತ್ತುವುದನ್ನು ನೋಡಿದ್ದೇವೆ.

ಇದರಿಂದ ಅಪಘಾತಗಳು ಆಗುವ ಸಂಭವವು ಇದೆ. ಕೆಲವೊಂದು ಬಸ್‍ಗಳಲ್ಲಿ ತಿಂಗಳ ಪಾಸ್ ಮಾಡಿಸಿರುವ ವಿದ್ಯಾರ್ಥಿಗಳನ್ನು ಬಸ್ಸಿಗೆ ಹತ್ತಿಸುವುದಿಲ್ಲ. ಇದರಿಂದ ಇಂತಹ ಘಟನೆಗಳಿಂದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.ಹೀಗಿದ್ದರೂ ಸಾರಿಗೆ ಅಧಿಕಾರಿಗಳು ಹೆಚ್ಚುವರಿ ಬಸ್‍ಗಳನ್ನು ಬಿಡದೆ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಜೀವದ ಜೊತೆ ಚೆಲ್ಲಾಟವಾಡುತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಸ್ತೆ ಸಾರಿಗೆ ನಿಗಮದವರು ಬೆಳಗಿನ ಸಮಯದಲ್ಲಿ ಹೆಚ್ಚುವರಿ ಬಸ್‍ಗಳನ್ನು ಬಿಡುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಸಾರಿಗೆ ಇಲಾಖೆಯ ಅಧಿಕಾರಿ ಬಿ.ಟಿ.ಕುಮಾರ್, ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಹೆಚ್ಚುವರಿ ಬಸ್‍ಗಳನ್ನು ಬಿಡಿಸಿಕೊಡುವುದಾಗಿ ಭರವಸೆ ನೀಡಿದರು.ಪ್ರತಿಭಟನೆಯಲ್ಲಿ ಬಣದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ಉಪಾಧ್ಯಕ್ಷ ರಾಘವೇಂದ್ರ ಹೊಳ್ಳ, ಪದಾಧಿಕಾರಿಗಳಾದ ತಾರಾನಾಥ್, ರೇವಣ್ಣ, ಮಂಜುನಾಥ್, ವಿದ್ಯಾರ್ಥಿಗಳಾದ ನಿಸರ್ಗ, ನವ್ಯ, ಸಾಗರ್ ಮತ್ತಿತರರು ಪಾಲ್ಗೊಂಡಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin