ಹೆಜ್ಜೇನು ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

turvekere-5

ತುರುವೇಕೆರೆ, ಅ.20- ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೊಮ್ಮೇನಹಳ್ಳಿಯಲ್ಲಿ ನಡೆದಿದೆ.ಬೊಮ್ಮೇನಹಳ್ಳಿ ನಿವಾಸಿ ಟಿ.ಪಿ.ಮಂಜುನಾಥ್ (36) ಮೃತ ದುರ್ದೈವಿ.ಮಂಜುನಾಥ್ ತಮ್ಮ ಜಮೀನಿನಲ್ಲಿ ಭಾನುವಾರ ಬೆಳಗ್ಗೆ ಅವರೇಗಿಡಕ್ಕೆ ಔಷದಿ ಸಿಂಪಡಿಸಲು ತೆರಳಿದ್ದ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿವೆ. ಇದರಿಂದ ತೀವ್ರ ಗಾಯಗೊಂಡಿದ್ದು, ತಕ್ಷಣ ಸರ್ಕಾರಿ ಆಸ್ಪತ್ರೆಗೆ ಕರೆತಂದರೂ ಕಡಿತಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಿದ ವೈಧಾಧಿಕಾರಿಗಳು ಹೆಚ್ಚಿನ ಚಿಕಿತ್ಸೆಗೆ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಿದ್ದರು.ಅಲ್ಲಿಯೂ ಚಿಕಿತ್ಸೆ ಯಶಸ್ಸು ಕಾಣದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಿಸದೆ ಮಂಜುನಾಥ್ ಸಾವನ್ನಪ್ಪಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin