ಹೆದ್ದಾರಿಗಳಲ್ಲಿ ಮದ್ಯದಂಗಡಿ ನಿಷೇಧ ಆದೇಶ ಮಾರ್ಪಾಡು ಅರ್ಜಿ ನಾಳೆ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

Supreme_Court_of_India_-_Retouched

ನವದೆಹಲಿ, ಮಾ.28-ದೇಶದ ಎಲ್ಲ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ 500 ಮೀಟರ್‍ಗಳ ಒಳಗೆ ಇರುವ ಮದ್ಯದಂಗಡಿಗಳನ್ನು ಬಂದ್ ಮಾಡಲು ಕಳೆದ ಡಿಸೆಂಬರ್‍ರಲ್ಲಿ ತಾನು ನೀಡಿದ್ದ ಆದೇಶವನ್ನು ಮಾರ್ಪಾಡು ಮಾಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಬಗ್ಗೆ ಸುಪ್ರೀಂಕೋರ್ಟ್ ನಾಳೆ ವಿಚಾರಣೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಮತ್ತು ನ್ಯಾಯಮೂರ್ತಿ ಎಸ್.ಕೆ ಕೌಲ್ ಅವರನ್ನು ಒಳಗೊಂಡ ಪೀಠ ನಾಳೆ ಈ ಕುರಿತು ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ನೇತೃತ್ವದ ವಕೀಲರ ತಂಡಕ್ಕೆ ಇಂದು ಭರವಸೆ ನೀಡಿದೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನಾಳೆ ಲಭ್ಯವಿಲ್ಲದಿದ್ದರೆ, ನಾನು ಒಂದು ಪ್ರತ್ಯೇಕ ಪೀಠವನ್ನು ರಚಿಸುತ್ತೇನೆ ಎಂದು ಮುಖ್ಯ ನ್ಯಾಯಮೂರ್ತಿ ತಿಳಿಸಿದ್ದಾರೆ.
ದೇಶದ ಎಲ್ಲ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ 500 ಮೀಟರ್‍ಗಳ ಒಳಗಿರುವ ಮದ್ಯದಂಗಡಿಗಳನ್ನು ಮುಚ್ಚುವ ಆದೇಶ ಏಪ್ರಿಲ್ 1 ರಿಂದ ಜಾರಿಗೆ ಬರಲಿದ್ದು, ತೀರ್ಪು ಬದಲಾವಣೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ತ್ವರಿತ ವಿಚಾರಣೆ ನಡೆಸಬೇಕೆಂದು ರೋಹಟಗಿ ನ್ಯಾಯಾಲಯಕ್ಕೆ ಕೋರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin