ಹೆಬ್ಬಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿ ಮತಗಟ್ಟೆಯಲ್ಲಿ ಮೇ 14ರಂದು ಮರುಮತದಾನ

ಈ ಸುದ್ದಿಯನ್ನು ಶೇರ್ ಮಾಡಿ

sanjeev

ಬೆಂಗಳೂರು, ಮೇ 12 : ಮತಯಂತ್ರದ ತೊಂದರೆಯಿಂದ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ರಾಧಾಕೃಷ್ಣ ವಾರ್ಡ್‌ನ ಲೊಟ್ಟೆಗೊಲ್ಲಹಳ್ಳಿಯಲ್ಲಿರುವ ಗಾಂಧಿ ವಿದ್ಯಾಲಯದಲ್ಲಿ ಸ್ಥಾಪಿಸಿದ್ದ ಮತಗಟ್ಟೆ ಸಂಖ್ಯೆ 2ರಲ್ಲಿ ಮೇ 14ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಸಲು ನಿರ್ಧರಿಸಲಾಗಿದೆ. ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್ ತಿಳಿಸಿದರು.  ಮತಯಂತ್ರದಲ್ಲಿ ನಿರ್ದಿಷ್ಟ ಅಭ್ಯರ್ಥಿಯ ಹೆಸರಿನ ಮುಂದಿನ ಚಿಹ್ನೆಯ ಮುಂದಿನ ಗುಂಡಿ ಒತ್ತಿದರೆ, ಅದು ಬೇರೊಬ್ಬ ಅಭ್ಯರ್ಥಿಗೆ ಚಲಾವಣೆಯಾಗುತ್ತಿತ್ತು. ವಿವಿಪ್ಯಾಟ್‌ನಲ್ಲೂ ಬೇರೆ ಅಭ್ಯರ್ಥಿಯ ಚಿಹ್ನೆ ಕಾಣಿಸಿಕೊಳ್ಳುತ್ತಿತ್ತು. ಇಲ್ಲಿ ಅಭ್ಯರ್ಥಿಗಳಿಗಷ್ಟೇ ಅಲ್ಲ; ಅಧಿಕಾರಿಗಳಿಗೂ ಗೊಂದಲ ಉಂಟುಮಾಡಿತ್ತು.

Facebook Comments

Sri Raghav

Admin