ಹೆರಿಗೆ ಸಾವು ಹೆಚ್ಚಳ ಸಚಿವರ ಕಳವಳ

ಈ ಸುದ್ದಿಯನ್ನು ಶೇರ್ ಮಾಡಿ

Ramesh-Kumar

ಬೆಂಗಳೂರು, ಆ.9- ಸರ್ಕಾರ ಜಾರಿ ಮಾಡುವ ಯಾವುದೇ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಧಿಕಾರಿಗಳು ಮುಂದಾದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್ ಕುಮಾರ್ ಸಲಹೆ ಮಾಡಿದ್ದಾರೆ.  ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಧಾನಮಂತ್ರಿ ಸುರಕ್ಷತಾ ಮಾತೃತ್ವ ಅಭಿಯಾನ ಹಾಗೂ ಅಮ್ಮಂದಿರ ಸಂಪೂರ್ಣ ವಾತ್ಸಲ್ಯ ಕುರಿತ  `ಮಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.  ಎಲ್ಲರಿಗೂ ಸೌಲತ್ತು ಸಿಗಬೇಕೆಂಬ ಸದುದ್ದೇಶದಿಂದ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೆ ತರುತ್ತದೆ. ಇವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದಾಗ ಮಾತ್ರ ಕಾರ್ಯಕ್ರಮ ಸಾರ್ಥಕತೆ ಪಡೆದುಕೊಳ್ಳುತ್ತದೆ. ಇಲ್ಲದಿದ್ದರೆ ಹತ್ತರಲ್ಲಿ ಹನ್ನೊಂದು ಎಂಬಂತಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.

ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರು ಮತ್ತು ಮಧ್ಯಮ ವರ್ಗದವರಾಗಿರುತ್ತಾರೆ. ಶ್ರೀಮಂತರು ಕೋಟಿಗಟ್ಟಲೆ ಹಣ ಸುರಿದು ಖಾಸಗಿ ಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಹಾಗಾಗಿ ಇಲ್ಲಿಗೆ ಬರುವ ಬಡ ರೋಗಿಗಳಿಗೆ ಅವರಿಗೆ ಸ್ಪಂದಿಸಿ ಉತ್ತಮ ಚಿಕಿತ್ಸೆ ನೀಡಬೇಕು. ವೈದ್ಯರು ಹೃದಯ ವೈಶಾಲ್ಯತೆಯಿಂದ ವೃತ್ತಿಯ ಘನತೆ ಹೆಚ್ಚಿಸಬೇಕು ಎಂದು ಹೇಳಿದರು.  ಸರ್ಕಾರಿ ಆಸ್ಪತ್ರೆಗಳೆಂದರೆ ಕೆಟ್ಟ ಅಭಿಪ್ರಾಯವಿದೆ. ಉತ್ತಮ ಚಿಕಿತ್ಸೆ, ಸೌಲಭ್ಯ ಸಿಗುವುದಿಲ್ಲ , ವೈದ್ಯರು ಲಂಚ ಕೇಳುತ್ತಾರೆಂಬ ಆರೋಪಗಳಿಗೆ ಅಪವಾದವೆಂಬಂತೆ ವೈದ್ಯರು ಕೆಲಸ ನಿರ್ವಹಿಸಬೇಕೆಂದು ಸಲಹೆ ಮಾಡಿದರು.
ಇತ್ತೀಚಿನ ದಿನಗಳಲ್ಲಿ ನವಜಾತ ಶಿಶು ಮತ್ತು ತಾಯಂದಿರ ಮರಣ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಅದರಲ್ಲೂ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಹಾಗಾಗಿ ವೈದ್ಯರು ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕರ್ತವ್ಯ ನಿರ್ವಸಬೇಕೆಂದು ತಾಕೀತು ಮಾಡಿದರು.

ಶಾಸಕ ಅಶ್ವತ್ಥನಾರಾಯಣ ಮಾತನಾಡಿ, ಬಿಬಿಎಂಪಿ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೂ ಯಶಸ್ವಿಯಾಗಿ ಅನುಷ್ಟಾನಗಿಳ್ಳುತ್ತಿಲ್ಲ. ವಿಶೇಷವಾಗಿ ಆರೋಗ್ಯ ಕುರಿತ ಜನ ಜಾಗೃತಿ ಕಾರ್ಯಕ್ರಮಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ . ಅಧಿಕಾರಿಗಳು ಈ ಬಗ್ಗೆ ಆಸಕ್ತಿ ವಹಿಸಬೇಕೆಂದು ಸೂಚಿಸಿದರು.  ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಹಿರಿ-ಕಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Facebook Comments

Sri Raghav

Admin