ಹೈಕಮಾಂಡ್ ಅಂಗಳಕ್ಕೆ ಬ್ರಿಗೇಡ್ ವಿವಾದ : ಬಿಎಸ್ವೈ, ಜೋಷಿ ಮತ್ತು ಈಶ್ವರಪ್ಪ ದೆಹಲಿಗೆ

ಈ ಸುದ್ದಿಯನ್ನು ಶೇರ್ ಮಾಡಿ

Joshi

ಬೆಂಗಳೂರು, ಆ.22-ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ವಿವಾದ ಮತ್ತೆ ಬಿಜೆಪಿ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಇದರಿಂದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ, ಸಂಸದ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಮುಖಂಡರು ನಾಳೆ ದೆಹಲಿಗೆ ತೆರಳಲಿದ್ದಾರೆ.  ಎಲ್ಲಾ ರಾಜ್ಯಗಳ ಬಿಜೆಪಿ ರಾಜ್ಯ ಘಟಕಗಳ ಕೋರ್ ಕಮಿಟಿ ಸಭೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಭೆ ಕರೆದಿದ್ದು, ಅಂದು ಬೆಳಗ್ಗೆ 9 ರಿಂದ ರಾತ್ರಿ 9 ರವರೆಗೆ ನಿರಂತರವಾಗಿ ಸಭೆ ನಡೆಸಲಿದ್ದಾರೆ. ಪ್ರತಿ ರಾಜ್ಯದ ವರದಿಯನ್ನು ಪಡೆದುಕೊಳ್ಳಲಿದ್ದಾರೆ.

2017-18 ರಲ್ಲಿ ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಗೆಲ್ಲುವ ತಂತ್ರಗಾರಿಕೆಗೆ ಪೂರಕವಾಗಿ ಷಾ ವರದಿ ಪಡೆದುಕೊಳ್ಳಲಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಅವರು ರಾಜ್ಯ ಬಿಜೆಪಿ ಮುಖಂಡರಿಗೆ ದೆಹಲಿಗೆ ಬುಲಾವ್ ನೀಡಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ವರದಿ ವಿವರಿಸಿದೆ.   ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿ ಕೆ.ಎಸ್.ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅನ್ನು ಸ್ಥಾಪಿಸಿದ್ದಾರೆ. ಅಲ್ಲದೆ ಹಾವೇರಿಯಲ್ಲಿ ಸಮಾವೇಶ ನಡೆಸಲೂ ತೀರ್ಮಾನಿಸಿದ್ದಾರೆ.

ಈ ಸಭೆಯಲ್ಲಿ ಪ್ರಮುಖವಾಗಿ ರಾಜ್ಯದ ವಿದ್ಯಮಾನಗಳು ಚರ್ಚೆಗೆ ಬರಲಿವೆ ಎನ್ನಲಾಗಿದೆ. 2018ಕ್ಕೆ ರಾಜ್ಯ ವಿಧಾನಸಭಾ ಚುನಾವಣೆಯೂ ನಡೆಯಲಿದ್ದು, ರಾಜ್ಯದ ಬಗ್ಗೆ ಕೇಂದ್ರ ನಾಯಕರು ವಿಶೇಷ ಗಮನ ಹರಿಸಲಿದ್ದಾರೆ. ಸಧ್ಯ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಕಾರಣ ವರಿಷ್ಠರು ಕೊಂಚ ನಿರಾಳರಾಗಿದ್ದರೂ ಪ?ದಲ್ಲಿ ಪದೇ ಪದೇ ಕಾಡುವ ಅಸಮಾಧಾನ ವರಿಷ್ಠರಿಗೆ ತಲೆನೋವು ತರುತ್ತಿದೆ.   ಅಲ್ಲದೆ ಈಶ್ವರಪ್ಪ ಅವರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ ಯಡಿಯೂರಪ್ಪ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು, ಅದಕ್ಕೆ ಈಶ್ವರಪ್ಪ ತಿರುಗೇಟು ನೀಡಿರುವುದು ಪಕ್ಷದಲ್ಲಿನ ಆಂತರಿಕ ಕಚ್ಚಾಟ ಹೆಚ್ಚಾಗುವಂತೆ ಮಾಡಿದೆ. ಈ ಎಲ್ಲಾ ವಿದ್ಯಮಾನಗಳನ್ನೂ ಸಹ ಅಂದಿನ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಯಾವುದೇ ಹಿಂದುಳಿದ, ಹಿಂದ ಸಮಾವೇಶ ನಡೆಸುವುದಿದ್ದರೂ ಅದು ಪ?ದ ವೇದಿಕೆಯಡಿಯಲ್ಲೇ ನಡೆಸಬೇಕೆಂಬ ಸೂಚನೆಗೆ ಈಶ್ವರಪ್ಪ ಸೆಡ್ಡು ಹೊಡೆದಿದ್ದಾರೆ. ಆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರಲ್ಲಿ ಮುಸುಕಿನ ಗುದ್ದಾಟ ಮುಂದುವರಿದಿದೆ. ಈ ಜಟಾಪಟಿ ಕುರಿ ತಂತೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀರ್ಧ ರಾವ್ ಅವರು ಹೈಕಮಾಂಡ್ಗೆ ವಿವರ ನೀಡಿದ್ದಾರೆ ಎನ್ನಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin