ಹೈಕೋರ್ಟ್ ಮೊರೆಹೋದ ರೋಹಿಣಿ ಸಿಂಧೂರಿ

ಈ ಸುದ್ದಿಯನ್ನು ಶೇರ್ ಮಾಡಿ

Rohini--02ಬೆಂಗಳೂರು,ಮಾ.24- ಸಿಎಟಿ ಆದೇಶವನ್ನು ಪ್ರಶ್ನಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಿಂಧೂರಿ ಅವರ ವರ್ಗಾವಣೆ ಆದೇಶ ಪುನರ್ ಪರಿಶೀಲಿಸಿ ಹೊಸದಾಗಿ ಮತ್ತೆ ಆದೇಶ ಹೊರಡಿಸಬೇಕೆಂದು ಸಿಎಟಿ ಸರ್ಕಾರದ ಕಾರ್ಯದರ್ಶಿಗೆ ಸೂಚಿಸಿತ್ತು.  ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ಅವರು ಸಿಎಟಿ ಕೂಡ ನ್ಯಾಯಸಮ್ಮತವಾದ ತೀರ್ಪು ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿ ಸಿಎಟಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ನಾನು ಬಯಲಿಗೆಳೆದಿದ್ದೆ. ಹಾಗಾಗಿ ಸ್ಥಳೀಯ ರಾಜಕಾರಣಿಗಳು ಮುಖ್ಯಮಂತ್ರಿಗಳ ಮುಖಾಂತರ ಅಲ್ಲಿಂದ ನನ್ನನ್ನು ವರ್ಗಾವಣೆ ಮಾಡಿಸಿದ್ದರು. ಚುನಾವಣೆ ಸಮೀಪಿಸುತ್ತಿರುವುದರಿಂದ ನನ್ನ ವರ್ಗಾವಣೆ ಕೆಲವರಿಗೆ ಅನಿವಾರ್ಯವಾಗಿತ್ತು. ಇದರಿಂದಾಗಿ ನನ್ನ ವರ್ಗಾವಣೆಗೆ ಕೆಲವರು ಹುನ್ನಾರ ನಡೆಸಿದ್ದರು. ನಾನು ಹಾಸನ ಜಿಲ್ಲಾಧಿಕಾರಿಯಾಗಿಯೇ ಮುಂದುವರೆಯುವೆ. ನನಗೆ ಹೈಕೋರ್ಟ್‍ನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

Facebook Comments

Sri Raghav

Admin