ಹೊಟ್ಟೆ ಮೇಲೆ ಕಲ್ಲು ಇಟ್ಟುಕೊಂಡು ಕಾರ್ಮಿಕರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಕೊಪ್ಪಳ,ಫೆ.7-ಏಕಾಏಕಿ ಕಾರ್ಖಾನೆ ಮುಚ್ಚಿದ್ದರಿಂದ ಕಾರ್ಮಿಕರು ರಸ್ತೆ ಮಧ್ಯೆ ಮಲಗಿ ಹೊಟ್ಟೆಮೇಲೆ ಕಲ್ಲು ಇಟ್ಟುಕೊಂಡು ವಿನೂತನ ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಹಿರೆಬಗನಾಳ ಗ್ರಾಮದಲ್ಲಿ ನಡೆದಿದೆ.ಇಲ್ಲಿರುವ ಹರೇಕೃಷ್ಣ ಮೆಟಾಲಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಹೆಚ್ಚು ಕಾರ್ಮಿಕರನ್ನು ತೆಗೆದು ಹಾಕಿ ಗೇಟಿಗೆ ಬೀಗ ಹಾಕಲಾಗಿತ್ತು. ಆದರೆ ಕಳೆದ ಒಂದು ತಿಂಗಳ ಹಿಂದೆ ಕಾರ್ಖಾನೆ ಮೇಲೆ ಪರಿಸರ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಿಯಮ ಪಾಲಿಸುತ್ತಿಲ್ಲ ಎಂದು ನೋಟೀಸ್ ನೀಡಿತ್ತು ಎನ್ನಲಾಗಿದೆ.ಇದನ್ನೇ ಸಬೂಬು ಹೇಳಿಕೊಂಡು ಕಾರ್ಖಾನೆ ಮಾಲೀಕರು, ಪರಿಸರ ಮಾಲಿನ್ಯ ನಿಯಮ ಪಾಲಿಸದೆ ನಿರ್ಲಕ್ಷ್ಯ ತೋರಿದ್ದರಿಂದ ಕಾರ್ಖಾನೆಯನ್ನು ಸೀಸ್ ಮಾಡಲಾಗುವುದೆಂದು ತಿಳಿಸಲಾಗಿತ್ತು. ಇದಕ್ಕೂ ಜಗ್ಗದೆ ಕಾರ್ಖಾನೆ ಮುಚ್ಚಿರುವುದರಿಂದ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ.ಕಾರ್ಮಿಕರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಅವರನ್ನು ತೆರವುಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ ಪಟ್ಟು ಬಿಡದೆ ಹೋರಾಟ ಮುಂದಿವರೆಸಿರುವುದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin