ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

ಈ ಸುದ್ದಿಯನ್ನು ಶೇರ್ ಮಾಡಿ

firing--in--car

ಬೆಳಗಾವಿ,ಆ.18-ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೊಲ್ಲಾಪುರದಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರೊಂದು ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಬಳಿ ತೆರಳುತ್ತಿದ್ದಾಗ, ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತುಕೊಂಡ ಕಾರಿನ ಚಾಲಕ ಇಳಿದು ಓಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು.  ಕಾರು ಹೊತ್ತಿ ಉರಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.

 

► Follow us on –  Facebook / Twitter  / Google+

Facebook Comments

Sri Raghav

Admin