ಹೊಸ ಕೈಗಾರಿಕಾ ನೀತಿ ಅನುಷ್ಠಾನಗೊಳಿಸುವ ಬಗ್ಗೆ ಮೌಲ್ಯಮಾಪನ ಮಾಡಲು ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

CM-00002

ಬೆಂಗಳೂರು,ನ.2-ಹೊಸ ಕೈಗಾರಿಕಾ ನೀತಿ ಅನುಷ್ಠಾನಗೊಳಿಸುವ ಬಗ್ಗೆ ಮೌಲ್ಯಮಾಪನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧದಲ್ಲಿ ನಡೆದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ. ಹೊಸ ಕೈಗಾರಿಕಾ ನೀತಿ ಜಾರಿಗೆ ಬಂದು ಎರಡು ವರ್ಷ ಕಳೆದಿದ್ದು ಈ ಬಗ್ಗೆ ಮೌಲ್ಯಮಾಪನ ಮಾಡಬೇಕೆಂದು ಸೂಚನೆ ಕೊಟ್ಟಿದ್ದಾರೆ. ಪ್ರಸಕ್ತ ಸಾಲಿನ ಆಯವ್ಯಯ ಘೋಷಣೆಯಂತೆ ಶೇ.50.06ರಷ್ಟು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಸಾಧನೆ ಮಾಡಲಾಗಿದ್ದು, ರಾಜ್ಯದಲ್ಲಿ ಬಂಡವಾಳ ತೊಡಗಿಸುವವರಿಗೆ ಅಗತ್ಯ ನೆರವನ್ನು ಸಕಾಲದಲ್ಲಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಜನವರಿಯಿಂದ ಜುಲೈವರೆಗಿನ ಅವಧಿಯಲ್ಲಿ ಕರ್ನಾಟಕ ಬಂಡವಾಳ ಆಕರ್ಷಣೆಯಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ವೆಸ್ಟ್ ಕರ್ನಾಟಕದಲ್ಲಿ ಮಾಡಿಕೊಂಡ ಒಪ್ಪಂದದಂತೆ 3258 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. 303 ಯೋಜನೆಗಳಿಗೆ ಸಂಬಂಧಿಸಿದಂತೆ 74.316 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಭೆಗೆ ಮಾಹಿತಿ ಒದಗಿಸಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ. ಸಚಿವರಾದ ಆರ್.ವಿ.ದೇಶಪಾಂಡೆ, ರಮೇಶ್ ಜಾರಕಿಹೊಳಿ, ರುದ್ರಪ್ಪ ಲಮಾಣಿ ಸೇರಿದಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin