ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಸಿಸಿ ಟಿವಿ, ಹೆಲ್ಪ್ ಲೈನ್ ಸೆಂಟರ್

ಈ ಸುದ್ದಿಯನ್ನು ಶೇರ್ ಮಾಡಿ

New-Year-02

ಬೆಂಗಳೂರು, ನ.28-ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಹೊಸ ತಂತ್ರಜ್ಞಾನ ಬಳಿಸಿಕೊಂಡು ಸಿಸಿ ಟಿವಿ, ಹೆಲ್ಪ್ ಲೈನ್ ಸೆಂಟರ್ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್‍ಗೆ ಪಾಲಿಕೆ ಸಭೆಯಲ್ಲಿಂದು ಮೇಯರ್ ಸಂಪತ್‍ರಾಜ್ ಸೂಚಿಸಿದರು. ಡಿಸೆಂಬರ್ 31ರಂದು ಹೊಸ ವರ್ಷ ಆಚರಣೆಗೆ ಎಲ್ಲೆಲ್ಲಿ ಹೆಚ್ಚು ಜನ ಸೇರುತ್ತಾರೋ ಅಲ್ಲಿ ಸಿಸಿ ಟಿವಿ ಅಳವಡಿಸಿ ಹೆಚ್ಚು ಭದ್ರತೆ ಒದಗಿಸುವ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.

ಜಿಎಸ್‍ಟಿ ಜಾರಿ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಜಲ ಮಂಡಳಿ ಹೊರಡಿಸಿರುವ ಆದೇಶ ನನಗೆ ಪೂರ್ಣವಾಗಿ ಗೊತ್ತಿಲ್ಲ. ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸಿ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು. ಮಾರ್ಕೆಟ್, ಕೇಂದ್ರ ಕಚೇರಿ ಮತ್ತಿತರೆಡೆ ವೈಫೈ ಅಳವಡಿಸಿ ಎಂದು ಸೂಚಿಸಿದರು. ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೆಂಟ್ರಲ್ ಕಮಾಂಡೆಂಟ್ ಕಂಟ್ರೋಲ್ ರೂಂ ಸಿಸ್ಟಮ್ ಮಾಡಲು ನಾವು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಇದಕ್ಕೆ ಹೊಸ ಸಾಫ್ಟ್‍ವೇರ್ ಅಳವಡಿಸಬೇಕಿದೆ ಎಂದರು. ಪೊಲೀಸ್ ಕಂಟ್ರೋಲ್ ರೂಂ ಮಾದರಿಯಲ್ಲೇ ನಮ್ಮ ಕಂಟ್ರೋಲ್ ರೂಂ ಕಾರ್ಯ ನಿರ್ವಹಿಸಲಿದೆ. ಈ ಯೋಜನೆ 3 ತಿಂಗಳೊಳಗೆ ಜಾರಿಯಾಗಲಿದೆ ಎಂದು ತಿಳಿಸಿದರು.

Facebook Comments

Sri Raghav

Admin