ಹೊಸ ವಿವಾದ ಸೃಷ್ಟಿಸಿದ ಡೊನಾಲ್ಡ್ ಟ್ರಂಪ್

ಈ ಸುದ್ದಿಯನ್ನು ಶೇರ್ ಮಾಡಿ

TRUMP

ವಾಷಿಂಗ್ಟನ್, ಆ.10- ಬಂದೂಕು ಹಕ್ಕು ಕಾರ್ಯಕರ್ತರು ಹಿಲರಿ ಕ್ಲಿಂಟನ್ ಗೆಲ್ಲುವುದನ್ನು ತಡೆಗಟ್ಟಬಹುದು ಎಂದು ಹೇಳುವ ಮೂಲಕ ಅಮೆರಿಕದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ. ಈ ವಿವಾದಾತ್ಮಕ ಹೇಳಿಕೆಗೆ ಡೆಮಾಕ್ರಟಿಕ್ ಪಕ್ಷದಿಂದ ತೀವ್ರ ಟೀಕೆ ವ್ಯಕ್ತವಾಗಿದೆ.  ಸಾರ್ವತ್ರಿಕ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್‍ರ ಪತ್ನಿ ಹಿಲರಿ ಕ್ಲಿಂಟನ್ ವಿರುದ್ಧ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ಟ್ರಂಪ್ ಈಗಾಗಲೇ ಹಲವಾರು ವಿವಾದಗಳಿಗೆ ಗುರಿಯಾಗಿದ್ದಾರೆ.
ಟ್ರಂಪ್ ಹೇಳಿಕೆಯಿಂದ ಡೆಮಾಕ್ರಟಿಕ್ ಪಕ್ಷದ ವಿರುದ್ಧ ಹಿಂಸಾಚಾರ ಭುಗಿಲೇಳುವ ಸಾಧ್ಯತೆ ಇದೆ ಎಂದು ಕ್ಲಿಂಟನ್ ಬಣ ಆತಂಕ ವ್ಯಕ್ತಪಡಿಸಿದೆ.  ಟ್ರಂಪ್ ಅಧ್ಯಕ್ಷರಾದರೆ ದೇಶದ ಭದ್ರತೆಗೆ ಧಕ್ಕೆಯಾಗಲಿದೆ ಎಂದು ರಾಷ್ಟ್ರೀಯ ಭದ್ರತಾ ಪರಿಣಿತರು ಮತ್ತು ರಾಜತಾಂತ್ರಿಕ ಅಧಿಕಾರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

Facebook Comments

Sri Raghav

Admin