1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್: ಶಿಕ್ಷಣ ಇಲಾಖೆ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.20- ಕೊರೋನಾ ಸೋಂಕಿನ ಎರಡನೇ ಅಲೆ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮತ್ತು ಫಲಿತಾಂಶ ಪ್ರಕಟಣೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ತರಗತಿವಾರು ನಿರ್ಧಾರ ಕೈಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಒಂದರಿಂದ ಐದನೇ ತರಗತಿ ಮತ್ತು ಆರರಿಂದ ಒಂಭತ್ತನೇ ತರಗತಿಗಳವರೆಗೆ ಮೌಲ್ಯಾಂಕನ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. 1ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ನಿರ್ವಹಿಸಿದ ದಾಖಲೆಗಳು, ಸಂವಹನದ ಆಧಾರದ ಮೇಲೆ ಕೆಲವು ಶಾಲೆಯವರು ಆನ್‍ಲೈನ್ ಮೂಲಕ ತರಗತಿ ನಿರ್ವಹಿಸಬೇಕು.

ಈ ಸಂದರ್ಭದಲ್ಲಿ ಅವಲೋಕಿಸಿದ ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಮಕ್ಕಳಿಗೆ ನೀಡಿದ್ದ ಪ್ರಬಂಧ, ಗೃಹ ಕೆಲಸ ಇತರೆ ಚಟುವಟಿಕೆಗಳನ್ನಾಧರಿಸಿದ ಕೃತಿ ಸಂಪುಟ ಇತರೆ ಲಭ್ಯ ದಾಖಲೆಗಳನ್ನು ಅವಲೋಕಿಸಿ ಈವರೆವಿಗೆ ಪೂರೈಸಿದ ಪಠ್ಯವಸ್ತು,ಸಾಮಥ್ರ್ಯ, ಕಲಿಕಾ-ಫಲಗಳ ಸಾಧನೆ ಮತ್ತು ಕೊರತೆಗಳನ್ನು ಶಾಲಾ ಹಂತದಲ್ಲಿ ಸಿಸಿಇ ನಿಯಮಗಳಂತೆ ವಿಶ್ಲೇಷಿಸಿ ಪ್ರಗತಿ ಪತ್ರದಲ್ಲಿ ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಮುಂದಿನ ತರಗತಿಗೆ ಬಡ್ತಿ ನೀಡುವುದು ಮತ್ತು ಅದನ್ನು ಪ್ರಗತಿ ಪತ್ರದಲ್ಲಿ ದಾಖಲಿಸುವುದು ಸೇರಿದಂತೆ ಈ ಎಲ್ಲ ಪ್ರಕ್ರಿಯೆಗಳನ್ನು ಏ.30ರೊಳಗೆ ನಿರ್ವಹಿಸಿ ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ. ಒಂದರಿಂದ ಐದನೇ ತರಗತಿಗಳು: 1ರಿಂದ 5ನೇ ತರಗತಿವರೆಗೆ ಶಾಲಾ ಹಂತದಲ್ಲಿ ಮಕ್ಕಳ ಪ್ರಗತಿ ವಿಶ್ಲೇಷಿಸಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುವುದು.

ಹಾಗೆಯೇ ಈ ತರಗತಿಗಳ ವಿದ್ಯಾರ್ಥಿಗಳು ಶಾಲೆಗೆ ಭೌತಿಕವಾಗಿ ಹಾಜರಾಗಲು ಇದುವರೆವಿಗೂ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿ ಅವಕಾಶ ಕಲ್ಪಿಸದೇ ಇರುವ ಹಿನ್ನೆಲೆಯಲ್ಲಿ ಈ ಮಕ್ಕಳಿಗೆ ಪ್ರತ್ಯೇಕ ಆನ್‍ಲೈನ್ ಇಲ್ಲವೇ ಆಫ್‍ಲೈನ್ ಮೂಲಕವೂ ಸಹ ಮೌಲ್ಯಾಂಕನ ಮಾಡಬಾರದು. ಮೌಲ್ಯಾಂಕನಕ್ಕಾಗಿ ಈ ಮಕ್ಕಳನ್ನು ಶಾಲೆಗಳಿಗೆ ಹಾಜರಾಗುವಂತೆ ಸೂಚಿಸಬಾರದು.

ಆರರಿಂದ ಒಂಭತ್ತನೇ ತರಗತಿಗಳು: 6ರಿಂದ 9ನೇ ತರಗತಿಗಳ ಮಕ್ಕಳು ಭೌತಿಕವಾಗಿ ತರಗತಿಗಳಿಗೆ ಹಾಜರಾಗುತಿದ್ದರು. ಹಾಗೆಯೇ ದೂರದರ್ಶನ ಚಂದನ ವಾಹಿನಿಯ ಸಂವೇದ, ಇ-ಕಲಿಕಾ, ಆನ್‍ಲೈನ್ ಸೇರಿದಂತೆ ವಿವಿಧ ಪ್ರಕಾರದಲ್ಲಿ ಪಾಠ ಪ್ರವಚನ ಆಲಿಸಿರುವ ಹಿನ್ನಲೆಯಲ್ಲಿ ಈ ಮೇಲಿನ ಪಾಠ ಪ್ರವಚನ, ಕಲಿಕಾ ಪೂರಕ ಚಟುವಟಿಕೆ, ಪ್ರಾಜೆಕ್ಟ್ ಚಟುವಟಿಕೆಗಳ ನೆಲೆಯಲ್ಲಿ ಈಗಾಗಲೇ ಕೈಗೊಂಡಿರುವ ರೂಪಣಾತ್ಮಕ ಮೌಲ್ಯಮಾಪನ ಹಾಗೂ ಸಂಕಲನಾತ್ಮಕ ಮೌಲ್ಯಮಾಪನವನ್ನು ನಿರ್ವಹಿಸಿದ ದಾಖಲೆಗಳನ್ನಾಧರಿಸಿ ಪಡೆದ ಅಂಕಗಳನ್ನು 100ಕ್ಕೆ ವೃದ್ಧಿಸಿ ಶ್ರೇಣಿ ನಮೂದಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುತ್ತದೆ.

6ರಿಂದ 9ನೇ ತರಗತಿಗಳಿಗೆ 2020ರ ಆಗಸ್ಟ್ 4ರಿಂದ ಅಕ್ಟೋಬರ್ 10ರವರೆಗೆ ವಿದ್ಯಾಗಮ ತರಗತಿಗಳು ನಡೆದಿವೆ. 2021 ಜನವರಿ 29ರಿಂದ ಫೆಬ್ರವರಿ 1ರವರೆಗೆ 9 ಮತ್ತು 10ನೇ ತರಗತಿಗಳು ಪೂರ್ಣವಾಗಿ ನಡೆದಿವೆ. ಫೆ. 22ರಿಂದ ಬೆಂಗಳೂರು ನಗರ ಮತ್ತು ಕೇರಳ ಗಡಿ ಭಾಗದ ಪ್ರದೇಶಗಳ ಶಾಲೆಗಳಲ್ಲಿ ವಿದ್ಯಾಗಮ ತರಗತಿಗಳು ನಡೆದಿವೆ. ಉಳಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ಈ ಅವಯಲ್ಲಿ ಪೂರ್ಣಾವ ಭೌತಿಕ ತರಗತಿಗಳು ನಡೆದಿವೆ.

ಆನ್‍ಲೈನ್ ಸೇರಿದಂತೆ ವಿವಿಧ ಪ್ರಕಾರದ ತರಗತಿಗಳು ನಡೆದಿವೆ. ಈ ಹಿನ್ನೆಲೆಯಲ್ಲಿ 6ರಿಂದ 9ನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಹಾಗೂ ಫಲಿತಾಂಶ ಪ್ರಕಟಣೆ ಮಾಡಲಾಗತ್ತದೆ.

Facebook Comments