ಬಿಗ್ ಬ್ರೇಕಿಂಗ್ : ಮಂಗಳವಾರ ರಾತ್ರಿ 8.00 ಗಂಟೆಯಿಂದ ಬೆಂಗಳೂರು ನಗರ-ಗ್ರಾಮಾಂತರ ಕಂಪ್ಲೀಟ್ ಲಾಕ್ ಡೌನ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರ ಭಾಗದಲ್ಲಿ ಕೊರೊನಾ ನಿಯಂತ್ರಣ ಮೀರಿ ಹಬ್ಬುತ್ತಿರುವ ಹಿನ್ನೆಲೆ,ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಕಳೆದ ಒಂದು ವಾರದಿಂದ ಸಾವಿರದ ಲೆಕ್ಕದಲ್ಲಿ ಕೊರೊನಾ ಪ್ರಕರಣಗಳ ಬೆಳಕಿಗೆ ಬರುತ್ತಿವೆ. ಕೊರೊನಾ ನಿಯಂತ್ರಣಕ್ಕಾಗಿ ತಜ್ಞರ ಸಲಹೆಯ ಮೇರೆಗೆ ಒಂದು ವಾರದವರೆಗೆ ಲಾಕ್‍ಡೌನ್ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ತಜ್ಞರ ಸಲಹೆ ಮೇರೆಗೆ ದಿನಾಂಕ: 14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ ಅಂದರೆ ದಿನಾಂಕ: 22.07.2020 ರ ಬೆಳಿಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.

ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್‍ಡೌನ್ ಸಂಧರ್ಬದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಹಗಲಿರಳು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಮತ್ತು ಪೋಲಿಸ್ ಸಿಬ್ಬಂದಿಗಳು ಹಾಗೂ ಎಲ್ಲಾ ಅಧಿಕಾರಿಗಳು, ಸ್ವಯಂ ಸೇವಕರು ಮನೆ ಮನೆಗೂ ಕೋವಿಡ್-19 ಕುರಿತು ಮಾಹಿತಿ ನೀಡುತ್ತಿರುವ ಪತ್ರಕರ್ತರು ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ನಾನು ಇನ್ನೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ.ಕೋವಿಡ್-19ಸೋಂಕು ಹರಡುವುದನ್ನು ನಿಯಂತ್ರಿಸಲು ನಿಮ್ಮ ಸಹಯೋಗ ಅತಿ ಅಗತ್ಯ ಎಂದು ಕೋರಿದ್ದಾರೆ‌.

ಇದಕ್ಕೂ ಮುನ್ನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ  ಸಿಎಂ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ, ಲಾಕ್ ಡೌನ್ ಕ್ರಮದ ಕುರಿತ ಗಂಭೀರ ಸಮಾಲೋಚನೆ ನಡೆಯಿತೆನ್ನಲಾಗಿದೆ.

ಮತ್ತೊಂದೆಡೆ ಕಾನೂನಿನ ಮೂಲಕ ವಲಸೆಗಾರರನ್ಮು ಕಟ್ಟಿ ಹಾಕುವುದು ಕಷ್ಟ ಎಂದಿದ್ದಾರೆ. ಪ್ರಮುಖವಾಗಿ ಅಧಿಕಾರಿಗಳು ಈ ರೀತಿಯ ಮಾಡಿದ್ರೆ ಅನಿಯಂತ್ರಿತ ವಲಸೆ ತಡೆಯಬಹುದು ಎಂದು ಈ ಅಧಿಕಾರಿಗಳು ಕೆಲ ಸಲಹೆಗಳನ್ನ ನೀಡಿದ್ದಾರೆ.

ಜನಪ್ರತಿನಿಧಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರೋಂದಲನಕ್ಕೆ ಕೈಜೋಡಿಸಬೇಕು‌.ಬೆಂಗಳೂರು ಬಿಟ್ಟು ಹೊರಗೆ ಹೋಗಬೇಡಿ ಅಂತ ಮನವರಿಕೆ ಮಾಡಬೇಕು ಅಂತರ್ ಜಿಲ್ಲಾ ಓಡಾಟಕ್ಕೆ ಬ್ರೇಕ್ ಹಾಕಿದಲ್ಲಿ ಮಾತ್ರ ಒಂದಷ್ಟು ಮಟ್ಟದ ವಲಸೆಗೆ ಕಡಿವಾಣ ಹಾಕಬೇಕು ಎಂದು ಸಲಹೆ ಮಾಡಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟಾರೆ ಕೊರೋನಾ ಪ್ರಕರಣಗಳ ಸಂಖ್ಯೆ 35 ಸಾವಿರ ದಾಟಿದೆ. ಬೆಂಗಳೂರಿನಲ್ಲಂತೂ ಇದು 16 ಸಾವಿರದ ಗಡಿ ದಾಟಿಬಿಟ್ಟಿದೆ. ಹೆಚ್ಚೂಕಡಿಮೆ ನಗರದ ಪ್ರತಿಯೊಂದು ಪ್ರದೇಶದಲ್ಲೂ ಸೋಂಕು ವ್ಯಾಪಿಸಿದೆ.

ಸರಕಾರಕ್ಕೆ ಒಂದು ಕಡೆ ಆರ್ಥಿಕ ಪುನಶ್ಚೇತನದ ಚಿಂತೆಯಾದರೆ, ಇನ್ನೊಂದೆಡೆ ಕೈಮೀರಿ ಹೋಗುತ್ತಿರುವ ಕೊರೋನಾ ಪರಿಸ್ಥಿತಿ ಆತಂಕ ಮೂಡಿಸಿದೆ. ಯಡಿಯೂರಪ್ಪ ಅವರು ಅಳೆದುತೂಗಿ ಒಂದು ವಾರ ಲಾಕ್​ಡೌನ್​ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆನ್ನಲಾಗಿದೆ.

Facebook Comments

Sri Raghav

Admin